ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದು ಪಾಟೀಲ, ಲಿಂಗಾರೆಡ್ಡಿಗೌಡಗೆ ಖುಲಾಯಿಸಿದ ಅದೃಷ್ಟ

Last Updated 25 ನವೆಂಬರ್ 2020, 3:17 IST
ಅಕ್ಷರ ಗಾತ್ರ

ಕಲಬುರ್ಗಿ: ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ ಅವರ ಪುತ್ರ, ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಅವರನ್ನು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ನೇಮಕ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಚಂದು ಪಾಟೀಲ, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮ ಅವಕಾಶ ನೀಡಿದ್ದಾರೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುವೆ. ಸಾಂಪ್ರದಾಯಿಕ ಇಂಧನದ ಜೊತೆಗೆ ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿಕೊಳ್ಳುವಂತೆ ರೈತರ ಮಧ್ಯೆ ಜಾಗೃತಿ ಮಾಡುವೆ. ಈ ಕ್ಷೇತ್ರದಲ್ಲಿನ ಸಂಶೋಧನೆಗಳ ಬಗ್ಗೆ ಮಾಹಿತಿ ಪಡೆದು ಅವುಗಳ ಅನುಷ್ಠಾನಕ್ಕೆ ಶ್ರಮಿಸುವೆ’ ಎಂದರು.

ಲಿಂಗಾರೆಡ್ಡಿ ನೇಮಕ: ವರ್ಷಗಳಿಂದ ಖಾಲಿ ಉಳಿದಿದ್ದ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ (ಹಿಂದಿನ ತೊಗರಿ ಅಭಿವೃದ್ಧಿ ಮಂಡಳಿ)ಯ ನಿರ್ದೇಶಕ ಹಾಗೂ ಅಧ್ಯಕ್ಷರನ್ನಾಗಿ ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ಬಿಜೆಪಿ ಮುಖಂಡ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಇವರು ಮೂಲತಃ ಜೆಡಿಎಸ್ ಪಕ್ಷದವರು. ನಂತರ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಓಡಾಡಿ ಉಮೇಶ ಜಾಧವ ಅವರ ಗೆಲುವಿನಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದರು.

ಲಿಂಗಾರೆಡ್ಡಿಗೌಡ ಅವರ ನೇಮಕಕ್ಕೆ ನಾಲವಾರ ವಲಯದ ಹಲವು ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದು, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT