ಅಫಜಲಪುರ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಅವರೇ ಸಿಎಂ ಆಗಿ ಮುಂದುವರೆಯಬೇಕು. ಏನಾದರೂ ಸಿಎಂ ಬದಲಾವಣೆ ಮಾಡಿದ್ದಲ್ಲಿ ನಡೆಯುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಈಗಾಗಲೇ ಸಿದ್ರಾಮಯ್ಯನವರಿಗೆ ಹೇಳಿ ಬಂದಿದ್ದೇನೆ’ ಎಂದು ಮಾಜಿ ಸಚಿವ ಮಾಲೀಕಯ್ಯದಾರ್ ಗುತ್ತೇದಾರ ಹೇಳಿದರು.

ತಾಲ್ಲೂಕಿನ ಬಂಕಲಗ ಗ್ರಾಮದ ಹೊಸ ಬಡಾವಣೆಯಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಅಡಿಗಲ್ಲು ಸಮಾರಂಭ ಹಾಗೂ ಹೋಮಹವನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ತಾಲ್ಲೂಕು ರಾಜಕೀಯದಲ್ಲಿ ಇನ್ನೆರಡು ವರ್ಷದಲ್ಲಿ ಬದಲಾವಣೆ ಗಾಳಿ ಬೀಸಲಿದ್ದು, ಅರುಣಕುಮಾರ ಎಂ.ಪಾಟೀಲ ಮತ್ತು ನಾನು ಯಾವ್ಯಾವ ಪಕ್ಷದಲ್ಲಿರುತ್ತೇವೋ ಗೊತ್ತಾಗಲ್ಲ’ ಎಂದು ತಿಳಿಸಿದರು.

‘ಕಾಂಗ್ರೆಸ್ನಲ್ಲಿದ್ದಾಗ ಗುರುತಿಸಿ ಸಚಿವ ನೀಡದ ಕಾರಣ ಬೇಸತ್ತು ಬಿಜೆಪಿಗೆ ಬಂದಿದ್ದೆ ಅಲ್ಲಿಯೂ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಬೀರಲಿಂಗೇಶ್ವರ ದೇವಸ್ಥಾನದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 1 ಕೋಟಿ ಅನುದಾನ ಮಂಜೂರು ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿದರು.

ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಮಾತನಾಡಿ, ‘ಬಂಕಲಗ ಗ್ರಾಮದ ಹೊಸ ಬಡಾವಣೆಯಲ್ಲಿ ಬೀರಲಿಂಗೇಶ್ವರ ದೇವಸ್ಥಾನದ ಅಡಿಗಲ್ಲು ಮಾಡಲಾಗಿದ್ದು, ಅದಕ್ಕೂ ಸಹ ಸರ್ಕಾರದಿಂದ ₹50 ಲಕ್ಷ ಅನುದಾನ ಕೊಡಿಸಲಾಗುವುದು’ ಎಂದು ತಿಳಿಸಿದರು.

ಹುಲಿಜಂತಿಯ ಮಾಳಿಂಗರಾಯ ದೇವಸ್ಥಾನದ ಮಾಳಿಂಗರಾಯ ಮಹಾರಾಜರು ಆಶೀರ್ವಚನ ನೀಡಿ ಮಾತನಾಡಿ, ‘ಬಂಕಲಗ ಗ್ರಾಮಸ್ಥರು ಹೊಸ ಬಡಾವಣೆಯಲ್ಲಿ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಸಮಿತಿಯವರು ಜೋಳಿಗೆಯನ್ನು ಹಾಕಬೇಕು ಮತ್ತು ಸರ್ಕಾರದಿಂದಲೂ ಅನುದಾನಕ್ಕಾಗಿ ಪ್ರಯತ್ನ ಮಾಡಬೇಕು’ ಎಂದು ಹೇಳಿದರು.

ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜೆ.ಎಂ.ಕೊರಬು ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ನಿತಿನ ಗುತ್ತೇದಾರ, ಸಿಂಡಿಕೇಟ್ ಸದಸ್ಯ ಮಹಾಂತೇಶ ಕೌಲಗಿ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಗುರುನಾಥ ಪೂಜಾರಿ, ತಾಲ್ಲೂಕು ಅಧ್ಯಕ್ಷ ಬೀರಣ್ಣ ಪೂಜಾರಿ, ಜಿಲ್ಲಾ ಕುರುಬ ಸಂಘದ ಕಾರ್ಯಾಧ್ಯಕ್ಷ ಸಾಹೇಬಣ್ಣ ಪೂಜಾರಿ ಸೇರಿದಂತೆ ಮತ್ತಿತರರು ಇದ್ದರು. ಯಲ್ಲಾಲಿಂಗ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು.

‘ಯಾರ ಟೀಕೆಗೆ ನಾನು ಹೆದರುವುದಿಲ್ಲ’

‘ಬಂಗಾರಪ್ಪನವರ ಮುಖ್ಯಮಂತ್ರಿ ಅವಧಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಒಳಗೊಂಡು 17 ಜನರಿಗೆ ಸಚಿವ ಸ್ಥಾನ ಕೊಡಿಸಿದ್ದೇನೆ. ನಾನು ಯಾವುದೇ ಸಚಿವ ಸ್ಥಾನಕ್ಕೆ ಆಸೆಪಟ್ಟಿಲ್ಲ. ಆದರೆ ನಮ್ಮ ತಂದೆಯವರಾದ ವೆಂಕಯ್ಯ ಗುತ್ತೇದಾರ ಅವರ ಅವಧಿಯಲ್ಲಿಯೇ ಭೀಮಾ ಏತ ನೀರಾವರಿ ಯೋಜನೆಗೆ ₹90 ಕೋಟಿ ವೆಚ್ಚದಲ್ಲಿ ಚಾಲನೆ ನೀಡಲಾಗಿತ್ತು. ಇವತ್ತು ತಾಲ್ಲೂಕಿನ ಜನರಿಗೆ ಅದರಿಂದ ಅನುಕೂಲವಾಗಿದೆ. ಕೆಲವೊಬ್ಬರು ಟೀಕೆ ಮಾಡುತ್ತಾರೆ. ಅವರ ಟೀಕೆಗೆ ನಾನು ಹೆದರುವುದಿಲ್ಲ’ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.