ಭಾನುವಾರ, ಮಾರ್ಚ್ 29, 2020
19 °C

ಅರಣ್ಯ ರಕ್ಷಕ ಸಿದ್ಧಾರೂಢ ಹೊಕ್ಕುಂಡಿಗೆ ಮುಖ್ಯಮಂತ್ರಿ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿಂಚೋಳಿ: ಅರಣ್ಯ ರಕ್ಷಕ ಸಿದ್ಧಾರೂಢ ಹೊಕ್ಕುಂಡಿ 2019ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಆಗಿದ್ದಾರೆ.

ಇಲ್ಲಿನ ವನ್ಯಜೀವಿ ಧಾಮದಲ್ಲಿ ಅರಣ್ಯ ರಕ್ಷಕರಾಗಿರುವ ಸಿದ್ಧಾರೂಢ ಅವರು ಅರಣ್ಯ ರಕ್ಷಣೆ ಮತ್ತು ಅಕ್ರಮ ಚಟುವಟಿಕೆಗಳನ್ನು ಪತ್ತೆ ಹಚ್ಚಿದ ಸಾಧನೆ ಪರಿಗಣಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಾತಿ ಶ್ರೀಧರ ಅಧ್ಯಕ್ಷತೆಯ ಸಮಿತಿಯು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ ಎಂದು ವನ್ಯಜೀವಿ ಧಾಮದ ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ ತಿಳಿಸಿದ್ದಾರೆ.

2010ರಲ್ಲಿ ಅರಣ್ಯ ರಕ್ಷಕರಾಗಿ ಸೇವೆಗೆ ಸೇರಿದ ಇವರು, ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣೆ ಮತ್ತು ಇತರ ಚಟುವಟಿಕೆ ಗುರುತಿಸಿ 2016ನೇ ಸಾಲಿನಲ್ಲಿ ಬಿ.ಮಾರಪ್ಪ ಸ್ಮಾರಕ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಉತ್ತಮ ವನ್ಯಜೀವಿ ಛಾಯಾಗ್ರಾಹಕರೂ ಆಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)