ಗುರುವಾರ , ಏಪ್ರಿಲ್ 9, 2020
19 °C

ಮಕ್ಕಳ ಭವಿಷ್ಯ ರೂಪಿಸುವುದು ಪಾಲಕರ ಕರ್ತವ್ಯ: ಜಿ.ಪಂ. ಸಿಇಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಅಸಂಘಟಿತ ವಲಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಅವರ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ. ರಾಜಾ ಹೇಳಿದರು.

ಭಾನುವಾರ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕರ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಆಯೋಜಿಸಿದ್ದ ‘ಕಾರ್ಮಿಕರ ಸಮ್ಮಾನ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

‘ಅಸಂಘಟಿತ ಕಾರ್ಮಿಕರ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮತ್ತು ಅರೋಗ್ಯ ಪ್ರಾಥಮಿಕ ಕೇಂದ್ರಗಲ್ಲಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸಲಾಗುತ್ತಿದೆ. ಪೋಷಕರು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕನಸು ಕಂಡು ಆ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು’ ಎಂದರು.

ದೇಶದಲ್ಲಿ ಸುಮಾರು ಶೇ 90ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಶೇ 50ರಷ್ಟು ಕಾರ್ಮಿಕರು ಮಾತ್ರ ಸರ್ಕಾರಿ ಸೌಲಭ್ಯ ಪಡೆಯಲು ಮುಂದೆ ಬರುತ್ತಿದ್ದಾರೆ. ಕಾರ್ಮಿಕ ವರ್ಗವು ಮತ್ತು ಸಂಘಟನೆಗಳು ತಮಗೆ ರೂಪಿಸಿರುವ ಹಲವಾರು ಕಲ್ಯಾಣ ಕಾರ್ಯಕ್ರಮಗಳ ಲಾಭ ಪಡೆಯಬೇಕು ಎಂದು ಕರೆ ನೀಡಿದರು.

ಸಹಾಯಕ ಕಾರ್ಮಿಕ ಆಯುಕ್ತೆ ಆರತಿ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಹಾಯಕ ಆಯುಕ್ತ ರಾಮಚಂದ್ರ ಗಡ್ಡದ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಶಂಕರ ಸಂಗಾವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಎನ್.ಸಿ.ಎಲ್.ಪಿ. ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಕಲಬುರ್ಗಿ ಜಿಲ್ಲಾ ಕಟ್ಟಡ ಕಾರ್ಮಿಕರ ಒಕ್ಕೂಟದ ಸದಸ್ಯರ ಪ್ರಭು ಯಲಸಂಗಿ, ಹಿರಿಯ ಕಾರ್ಮಿಕ ನಿರೀಕ್ಷಕ ರವೀದ್ರಕುಮಾರ ಇದ್ದರು.

ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಸ್ವಾಗತಿಸಿದರು. ಶಿವಲೀಲಾ ಡಿಗ್ಗಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ಶ್ರಮ ಸಮ್ಮಾನ್ ಮತ್ತು ಧನ ಸಹಾಯ ವಿತರಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು