ಮಂಗಳವಾರ, ಏಪ್ರಿಲ್ 13, 2021
23 °C
ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೌಲಭ್ಯ ಪೂರೈಸಲು ಅನುದಾನ ಮಂಜೂರು

ಚಿಂಚೋಳಿ: 211 ಕೊಠಡಿಗಳ ನಿರ್ಮಾಣ

ಜಗನ್ನಾಥ ಡಿ. ಶೇರಿಕಾರ Updated:

ಅಕ್ಷರ ಗಾತ್ರ : | |

Prajavani

ಚಿಂಚೋಳಿ: ಚಿಂಚೋಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರ ವಿವಿಧ ಯೋಜನೆಗಳಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಾಖಲೆ ಪ್ರಮಾಣದಲ್ಲಿ ಅನುದಾನ ಮಂಜೂರು ಮಾಡಿದೆ. ಕೊಠಡಿಗಳ ನಿರ್ಮಾಣ ಭರದಿಂದ ಸಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮತ್ತು 2019-20ನೇ ಸಾಲಿನ ನಬಾರ್ಡ್ ನೆರವಿನೊಂದಿಗೆ ಲೋಕೋಪಯೋಗಿ ಇಲಾಖೆ ಒಟ್ಟು ₹17.36 ಕೋಟಿ ಅಂದಾಜು ವೆಚ್ಚದಲ್ಲಿ 143 ಶಾಲಾ ಕೊಠಡಿಗಳ ನಿರ್ಮಾಣ ಕೈಗೊಳ್ಳಲಾಗಿದೆ.  ಈಗಾಗಲೇ 50 ಕೊಠಡಿಗಳನ್ನು ನಿರ್ಮಿಸಲಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ 2018-19ನೇ ಸಾಲಿನಲ್ಲಿ ಒಟ್ಟು ₹6.5 ಕೋಟಿ ವೆಚ್ಚದಲ್ಲಿ 49 ಕೊಠಡಿ, 2019-20ನೇ ಸಾಲಿನಲ್ಲಿ ₹2.5 ಕೋಟಿ ವೆಚ್ಚದಲ್ಲಿ 19 ಕೊಠಡಿ ಮಂಜೂರಾಗಿದ್ದು, ಪಂಚಾಯತ್ ರಾಜ್ ಎಂಜಿನಿಯರಿಂಗ್ ತಾಂತ್ರಿಕ ಉಪವಿಭಾಗದ ಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿವೆ. ಈಗಾಗಲೇ 62 ಕೊಠಡಿಗಳ ನಿರ್ಮಾಣ ಪೂರ್ಣಗೊಂಡಿವೆ.

‘ಚಿಂಚೋಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಶಕಗಳ ಹಿಂದೆ ನಿರ್ಮಿಸಿದ ಶಾಲಾ ಕಟ್ಟಡಗಳನ್ನು ಉರುಳಿಸಿ, ಹೊಸದಾಗಿ ನಿರ್ಮಿಸಲಾಗುತ್ತಿದೆ. 50 ಕೊಠಡಿಗಳು ಪೂರ್ಣಗೊಂಡಿದ್ದು, 93 ಕೊಠಡಿಗಳು ನಿರ್ಮಾಣದ ಹಂತದಲ್ಲಿವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗುರುರಾಜ ಜೋಶಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪಂಚಾಯತ ರಾಜ್ ತಾಂತ್ರಿಕ ಉಪವಿಭಾಗದಿಂದ ನಿರ್ಮಿಸುತ್ತಿರುವ 68 ಪೈಕಿ 62 ಕೊಠಡಿಗಳು ಪೂರ್ಣಗೊಂಡಿವೆ. 6 ಕೊಠಡಿಗಳು ನಿರ್ಮಾಣ ಹಂತದಲ್ಲಿವೆ’ ಎಂದು ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಹಮದ್ ಹುಸೇನ್ ತಿಳಿಸಿದರು.

*ಶಿಕ್ಷಣ ಅಭಿವೃದ್ಧಿಯ ಕೀಲಿ ಕೈ.ಇದನ್ನು ಮನಗಂಡು ಹಳೆಯ ಕಟ್ಟಡಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಮಂಜೂರು ಮಾಡಿಸಲಾಗಿದೆ.
- ಅವಿನಾಶ ಜಾಧವ, ಶಾಸಕ, ಚಿಂಚೋಳಿ

*ದಾಖಲೆ ಪ್ರಮಾಣದಲ್ಲಿ ಶಾಲಾ ಕಟ್ಟಡ ನಿರ್ಮಿಸುತ್ತಿರುವುದು ಶಿಕ್ಷಣ ಪ್ರೇಮಿಗಳಿಗೆ ಸಂತಸ ತಂದಿದೆ. ಭವಿಷ್ಯದಲ್ಲಿ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ನೆರವಾಗಲಿದೆ.
- ನಾಗಶೆಟ್ಟಿ ಭದ್ರಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ, ಚಿಂಚೋಳಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.