ಚಿಂಚೋಳಿ: ಬೈಕ್ ಸವಾರರನ್ನು ರಕ್ಷಿಸಲು ಸರಕು ಸಾಗಣೆ ವಾಹನ ಹಠಾತ್ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ರಸ್ತೆಯಲ್ಲಿಯೇ ಉರುಳಿದ ಘಟನೆ ಬುಧವಾರ ಮಧ್ಯಾಹ್ನ ರಾಜ್ಯ ಹೆದ್ದಾರಿ 32ರಲ್ಲಿ ಸಂಭವಿಸಿದೆ.

ಘಟನೆಯಲ್ಲಿ ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಇಬ್ಬರು ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಸುರೇಶ ಎಂಬುವವರಿಗೆ ಒಳ ಪೆಟ್ಟಾಗಿದ್ದು ಯಾವುದೇ ಅಪಾಯವಿಲ್ಲ ಎಂದು ವಾಹನ ಮಾಲೀಕರು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ತುಂಬಿಕೊಂಡು ಸಾಗುತ್ತಿದ್ದ ವಾಹನ ಹೊಡೇಬೀರನಹಳ್ಳಿ ಕೊರವಿ ಮಧ್ಯೆ ಹೆದ್ದಾರಿಯಲ್ಲಿ ಉರುಳಿದೆ. ತಕ್ಷಣ ಆಂಬುಲೆನ್ಸ್ ಕರೆಯಿಸಿ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಸ್ನಾನದ ಸಾಬೂನು, ಖೊಬ್ಬರಿ ಎಣ್ಣೆ ಸೇರಿದಂತೆ ವಿವಿಧ ವಸ್ತುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.