ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಬೆಳ್ಳಿ ಚೈನ್ ಹಾಗೂ ಮೊಬೈಲ್ ದೋಚಿದ್ದ ಆರೋಪಿಯನ್ನು ಚಿಂಚೋಳಿ ಪೊಲೀಸರು ಶುಕ್ರವಾರ ಹೈದರಾಬಾದ್ನಲ್ಲಿ ಬಂಧಿಸಿದ್ದಾರೆ.

ತಾಲ್ಲೂಕಿನ ಐನೋಳ್ಳಿ ಗ್ರಾಮದ ತಯ್ಯಬ್ ಮಿರನಶಹಾ ಫಕೀರ ಎಂಬಾತ ನನ್ನು ವಶಕ್ಕೆ ಪಡೆದ ಪೊಲೀಸರು, ಆತನ ಆರೋಗ್ಯ ತಪಾಸಣೆ ನಡೆಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕುಟುಂಬದಜತೆಗೆ ನಂಟು ಇಟ್ಟುಕೊಳ್ಳದ ತಯ್ಯಬ್, ಊರೂರು ಅಲೆಯುತ್ತ ಸಿಕ್ಕಸಿಕ್ಕ ಕೆಲಸ ಮಾಡುತ್ತಿದ್ದ. ಗೊಟ್ಟಮಗೊಟ್ಟ ಜಾತ್ರೆಗೆ ಬಂದಿದ್ದ ಈತ, ಸಮೀಪದ ಗ್ರಾಮದಲ್ಲಿ ನ.18ರಂದು ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ.

ಈತನ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ ಮಾರ್ಗದರ್ಶನದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಆರೋಪಿಯ ವಿರುದ್ದ ತೆಲಂಗಾಣದ ಮಿಯಾಪುರ ಠಾಣೆಯಲ್ಲಿ ಪೋಕ್ಸೊ ಹಾಗೂ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣವಿದ್ದು ಬಂಧನದ ವಾರಂಟ್ ಸಹ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.