ರೇವಗ್ಗಿ ರೇವಣಸಿದ್ದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಹಲವು ದಶಕಗಳ ಹಿಂದಿನ ಸೇತುವೆಗಳು ನೆಲಸಮಗೊಳಿಸಿ ಎತ್ತರದ ಸೇತುವೆ ನಿರ್ಮಾಣದ ಬೇಡಿಕೆಯಿದೆ. ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ.
– ಡಾ.ಅವಿನಾಶ ಜಾಧವ, ಚಿಂಚೋಳಿ ಶಾಸಕ
ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ವಿಶೇಷ ಪ್ಯಾಕೇಜ್ ನಾಗಾ ಈದಲಾಯಿ ಕೆರೆ ಮರು ನಿರ್ಮಾಣ ಚಂದ್ರಂಪಳ್ಳಿ ನೀರಾವರಿ ಯೋಜನೆಗೆ ಕಾಯಕಲ್ಪ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದು ಬಜೆಟ್‌ನಲ್ಲಿ ಮಂಜೂರಾತಿ ದೊರೆಯುವ ವಿಶ್ವಾಸವಿದೆ.
– ಸುಭಾಶ ರಾಠೋಡ, ಕೆಪಿಸಿಸಿ ಉಪಾಧ್ಯಕ್ಷ
ಚಿಂಚೋಳಿ ಮತಕ್ಷೇತ್ರದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಅರಣ್ಯ ಕಾಲೇಜು ಮಂಜೂರು ಮಾಡಬೇಕೆಂಬುದು ಜನರ ಒತ್ತಾಸೆಯಾಗಿದೆ. ಶಿಕ್ಷಣದಿಂದಲೇ ಬದಲಾವಣೆ ಸಾಧ್ಯವಿದೆ ಹೀಗಾಗಿ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿ ಚಿಂಚೋಳಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ವಿಶೇಷ ಕೊಡುಗೆ ನೀಡಬೇಕು.
– ಮಾರುತಿ ಗಂಜಗಿರಿ, ಭಾರತ ಮುಕ್ತಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ