ಚಿಂಚೋಳಿ: ‘ಜಗತ್ತು ವೇಗವಾಗಿ ಬೆಳೆಯುತ್ತಿದ್ದು, ನಮ್ಮಲ್ಲೂ ಬದಲಾವಣೆ ಆಗಬೇಕಾದರೆ ಶಿಕ್ಷಣ ಅತ್ಯಾವಶ್ಯಕ. ಪ್ರಪಂಚದಲ್ಲಿ ಈಗ ಜ್ಞಾನಕ್ಕೆ ಮಾತ್ರ ಬೆಲೆಯಿದೆ. ಯಾರು ಜ್ಞಾನ ಸಂಪಾದಿಸುತ್ತಾರೋ ಅವರು ಸಾಧನೆ ಮಾಡುತ್ತಾರೆ’ ಎಂದು ಅರಣ್ಯ ಮತ್ತು ಜೀವಿಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆಯ 24ನೇ ವಾರ್ಷಿಕೋತ್ಸವವನ್ನು ಭಾನುವಾರ ಉದ್ಘಾಟಿಸಿದ ಅವರು, ‘ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಈ ಭಾಗದಲ್ಲಿ ಶೈಕ್ಷಣಿಕ ಬದಲಾವಣೆಗೆ ಕಾರಣವಾಗಿರುವ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆ ಹಾಗೂ ಪಿಯು ವಿಜ್ಞಾನ ಮಹಾವಿದ್ಯಾಲಯಗಳು ಹಿಂದುಳಿದ ಗಡಿ ಭಾಗದ ವಿದ್ಯಾರ್ಥಿಗಳಿಗೆ ಕಾಮಧೇನು, ಕಲ್ಪವೃಕ್ಷವಾಗಿದೆ’ ಎಂದು ಶ್ಲಾಘಿಸಿದರು.

‘ಕಲ್ಯಾಣ ಕರ್ನಾಟಕ ಪ್ರದೇಶ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕವಾಗಿ ಬಹಳ ಮುಂದುವರಿದಿದೆ. ಆದರೆ, ಶೈಕ್ಷಣಿಕ, ಸಾಮಾಜಿಕ ಹಾಗೂ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಒಂದು ಕಾಲದಲ್ಲಿ ಕಲಬುರಗಿ, ಬೀದರ್ ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಶಿಕ್ಷಣ ಇಂದು ಗ್ರಾಮೀಣ ಪ್ರದೇಶಕ್ಕೂ ಪಸರಿಸಿದೆ’ ಎಂದರು.

ನಿವೃತ್ತ ಪ್ರಾಧ್ಯಾಪಕಿ ಶಾರದಾಬಾಯಿ ಸುಭಾಷ ರಾಠೋಡ್ ಮಾತನಾಡಿ, ‘ಚಿಂಚೋಳಿಯಂತಹ ಹಿಂದುಳಿದ ಪ್ರದೇಶದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅತಿಕಡಿಮೆ ಶುಲ್ಕ ಪಡೆದು ಕೇಂದ್ರೀಯ ಮಂಡಳಿಯ ಪಠ್ಯಕ್ರಮದ ಶಾಲೆ ತೆರೆದು ಜನಸೇವೆಯಲ್ಲಿ ತೊಡಗಿದ ಮಾಜಿ ಶಾಸಕ ಕೈಲಾಸ ವೀರೇಂದ್ರ ಪಾಟೀಲ ಅವರ ಸಾಮಾಜಿಕ ಕಾಳಜಿ ಶ್ಲಾಘನೀಯ’ ಎಂದು ಹೇಳಿದರು.

ಮುಗುಳ ನಾಗಾವಿ ಕಟ್ಟಿಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ರವಿ ಸಹುಕಾರ ತಂಬಾಕೆ, ಕ್ಷೇತ್ರ ಶಿಕ್ಷಣಾಧಿಕಾರಿ ವಿ. ಲಕ್ಷ್ಮಯ್ಯ, ಅಭಿನಂದನ ಪಾಟೀಲ, ಮಹೇಮೂದ್ ಪಟೇಲ್ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಇದ್ದರು.

ಅಧ್ಯಕ್ಷತೆ ವಹಿಸಿದ್ದ ಕೈಲಾಸ ವೀರೇಂದ್ರ ಪಾಟೀಲ ಮಾತನಾಡಿ, ‘24 ವರ್ಷಗಳ ಹಿಂದೆ ಸ್ಥಾಪನೆಯಾದ ನಮ್ಮ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಪಾಲಕರ ಸಹಕಾರ ಮುಖ್ಯವಾಗಿದೆ. ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವೈದ್ಯರು, ಎಂಜಿನೀಯರ್, ಕೃಷಿಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡುತ್ತ ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ’ ಎಂದರು.

ಉಪಾಧ್ಯಕ್ಷ ಬಸವರಾಜ ಮಾಲಿ ಶಿಕ್ಷಣ ಸಂಸ್ಥೆ ನಡೆದು ಬಂದ ದಾರಿ ವಿವರಿಸಿದರು. ಶಿವಕುಮಾರ ಪೋಲಕಪಳ್ಳಿ ನಿರೂಪಿಸಿದರು. ಅಬ್ರಾಹ್ಮ ಥಾಮಸ್ ಅತಿಥಿಗಳನ್ನು ಪರಿಚಯಿಸಿದರು. ವಿಶ್ವನಾಥ ನಾಯನೂರು ವಂದಿಸಿದರು.

ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದ 1ರಿಂದ 10 ತರಗತಿಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

ಹವಾಮಾನ ಬದಲಾವಣೆಗೆ ಪರಿಸರ ಮಾಲಿನ್ಯವೇ ಕಾರಣವಾಗಿದೆ. ಸಾರ್ವಜನಿಕರು ಸಂಘ–ಸಂಸ್ಥೆಗಳು ಹೆಚ್ಚೆಚ್ಚು ಮರಗಳನ್ನು ಬೆಳೆಸಿ ಹಸಿರು ಹೊದಿಕೆ ವಿಸ್ತರಿಸಲು ಕೈಜೋಡಿಸಬೇಕು
ಈಶ್ವರ ಖಂಡ್ರೆ ಅರಣ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.