ಚಿಂಚೋಳಿ: ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲರ ಪುತ್ರ ಹಾಗೂ ಮಾಜಿ ಶಾಸಕ ಕೈಲಾಸನಾಥ ಪಾಟೀಲ ಅವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡುವಂತೆ ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ್, ಅನಿಲಕುಮಾರ ಜಮಾದಾರ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.

ಕೈಲಾಸನಾಥ ಪಾಟೀಲರು ಒಂದು ಅವಧಿಗೆ ಶಾಸಕರಾಗಿದ್ದು ಕ್ಷೇತ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಚಿಂಚೋಳಿ ಮೀಸಲು ಕ್ಷೇತ್ರವಾದ ನಂತರ ರಾಜಕೀಯವಾಗಿ ಅವಕಾಶ ವಂಚಿತರಾಗಿರುವ ಕೈಲಾಸನಾಥ ಪಾಟೀಲ ಪಕ್ಷದ ನಿಷ್ಠಾವಂತ ನಾಯಕರಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಅವರಿಗೆ ಒಂದು ಅವಕಾಶ ನೀಡಿ ಪಕ್ಷದ ಬಲವರ್ಧನೆಗೆ ಕಾರಣರಾಗಬೇಕು’ ಮನವಿಯಲ್ಲಿ ತಿಳಿಸಿದ್ದಾರೆ.

ನಿಯೋಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಾಲಿ, ಜಿಲ್ಲಾ ಕಾರ್ಯದರ್ಶಿ ಮಹೇಮೂದ ಪಟೇಲ್, ಲಕ್ಷ್ಮಣ ಅವುಂಟಿ, ಜಗನ್ನಾಥ ಕಟ್ಟಿ, ಶರಣು ಪಾಟೀಲ, ಸುದರ್ಶನರೆಡ್ಡಿ ಪಾಟೀಲ, ಜಗನ್ನಾಥ ಈದಲಾಯಿ, ಸಂಗಯ್ಯಸ್ವಾಮಿ ಅಣವಾರ, ರೇವಣಸಿದ್ದ ಪೂಜಾರಿ, ವಿಶ್ವನಾಥ ಹೊಡೇಭಿರನಹಳ್ಳಿ, ಆನಂದ ಟೈಗರ್, ಸಂತೋಷ ಗುತ್ತೇದಾರ ಮೊದಲಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-31-894054245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.