ಚಿಂಚೋಳಿ: ಬೇಸಿಗೆ ಪ್ರಖರ ಬಿಸಿಲಿನಿಂದ ತಾಪಮಾನ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಐಪಿ ಸೆಟ್ಗಳಿಗೆ ಹಗಲಿನ ಮಧ್ಯಾಹ್ನ 12ರಿಂದ ತ್ರಿಫೇಸ್ ವಿದ್ಯುತ್ ಪೂರೈಸುತ್ತಿರುವುದರಿಂದ ರೈತರು ಹೀಟವೇವ್ಗೆ ತುತ್ತಾಗುವ ಆತಂಕವಿದೆ. ವಿದ್ಯುತ್ ಪೂರೈಕೆಯ ಸಮಯವನ್ನು ಬದಲಾವಣೆ ಮಾಡಿ ರೈತರಿಗೆ ನೆರವಾಗಬೇಕು’ ಎಂದು ಹಸರಗುಂಡಗಿಯ ವೀರಭದ್ರೇಶ್ವರ ಗೆಳೆಯ ಬಳಗ ಸೇವಾ ಸಂಸ್ಥೆಯ ಕಾರ್ಯದರ್ಶಿ ರಾಜಶೇಖರ ನಿಪ್ಪಾಣಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಜಿಲ್ಲಾಧಿಕಾರಿಗಳು ಹೀಟ್ವೇವ್ ಹಿನ್ನಲೆಯಲ್ಲಿ ಮುಂಜಾಗ್ರತೆ ವಹಿಸಲು ಮನವಿ ಮಾಡಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸಾಧ್ಯವಾದಷ್ಟು ಮನೆಯಲ್ಲಿ ಇರುವಂತೆ ಸೂಚಿಸಿದ್ದಾರೆ. ಹೀಗಿದ್ದರೂ ತಾಲ್ಲೂಕಿನಲ್ಲಿ ಐಪಿ ಸೆಟಗಳಿಗೆ ತ್ರಿಪೇಸ್ ವಿದ್ಯುತ್ ಪೂರೈಕೆ ಮಾಧ್ಯಾಹ್ನ ಮಾಡಲಾಗುತ್ತಿದೆ.

ರೈತರು ಬಿಸಿಲು ಲೆಕ್ಕಿಸದೇ ಹೊಲದಲ್ಲಿ ಕೆಲಸ ಮಾಡಿದರೆ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಹೆಚ್ಚಾಗಿದೆ. ತ್ರಿಫೇಸ್ ವಿದ್ಯುತ್ ಪೂರೈಕೆಯ ಸಮಯ ಬದಲಾವಣೆ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-31-952166686

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.