ಚಿಂಚೋಳಿ: ತಾಲ್ಲೂಕಿನ ಸಾಲೇಬೀರನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಸುಮಾರು ₹5 ಲಕ್ಷ ಮೊತ್ತದ ಜೋಳದ ಕಣಕಿ ಸುಟ್ಟು ಭಸ್ಮವಾಗಿದೆ.

ಗ್ರಾಮದ ಮಹಿಬೂಬಾಬೇಗಂ ಅವರಿಗೆ ಸೇರಿದ್ದ ಜೋಳದ ಕಣಕಿ ಇದಾಗಿತ್ತು. ಗ್ರಾಮದ ಬಳಿಯ ಖಾಲಿ ನಿವೇಶನದಲ್ಲಿ ಮೇವಿಗಾಗಿ ದಾಸ್ತಾನು ಮಾಡಿದ್ದರು. ಆದರೆ ಆಕಸ್ಮಿಕ ಹೊತ್ತಿದ್ದರಿಂದ ಸಂಪೂರ್ಣ ಸುಟ್ಟಿದೆ.

ಅಕ್ಕ ಪಕ್ಕದ ಮೇವು ದಾಸ್ತಾನು ಮಾಡಿದ್ದ ರೈತರು ಕೂಡಲೇ ಎಚ್ಚೆತ್ತುಕೊಂಡು ತಮ್ಮ ಬಣವಿಯತ್ತ ಬೆಂಕಿ ಹಬ್ಬದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ.

ಚಿಂಚೋಳಿಯ ಅಗ್ನಿಶಾಮಕ ಠಾಣೆಯಿಂದ ಅಗ್ನಿಶಾಮಕ ಅಧಿಕಾರಿ ಎಸ್.ಕೆ.ಹಸನ್ ನೇತೃತ್ವದಲ್ಲಿ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-1583216488

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.