ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿತ್ರಿಬಾಯಿ ಫುಲೆ ಸಂಘ ಉದ್ಘಾಟನೆ

ಶಿಕ್ಷಕಿಯರಿಂದ ಗುಣಮಟ್ಟದ ಶಿಕ್ಷಣದ ಜತೆ ಶಿಸ್ತಿನ ಪಾಠ; ಬಿಇಒ ಭದ್ರಶೆಟ್ಟಿ
Last Updated 16 ಮಾರ್ಚ್ 2022, 2:12 IST
ಅಕ್ಷರ ಗಾತ್ರ

ಚಿಂಚೋಳಿ: ‘ಶಿಕ್ಷಕಿಯರು ಶಿಕ್ಷಣದ ಕಣ್ಣುಗಳಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವುದರ ಜತೆಗೆ ಶಿಸ್ತು ಕಲಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಚಪ್ಪ ಭದ್ರಶೆಟ್ಟಿ ತಿಳಿಸಿದರು.

ಇಲ್ಲಿನ ಚಂದಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಈಚೆಗೆ ನಡೆದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಮಹಿಳಾ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಶಿಕ್ಷಕಿಯರ ಸಂಘದ ಜಿಲ್ಲಾ ಅಧ್ಯಕ್ಷೆ ಸೇವಂತಾ ಪಿ. ಚವ್ಹಾಣ ಮಾತನಾಡಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಕೇಂದ್ರ ಕಚೇರಿ ಧಾರವಾಡದಲ್ಲಿದ್ದು ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಅಸ್ತಿತ್ವಕ್ಕೆ ತರಲಾಗಿದೆ. ಕೆಲವು ತಾಲ್ಲೂಕುಗಳಲ್ಲಿ ಈ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಸುರೇಶ ಕೊರವಿ, ದೇವೇಂದ್ರಪ್ಪ ಹೋಳ್ಕರ್, ಸುರೇಶ ದೇಶಪಾಂಡೆ, ರವಿ ಕಾರಪೆಂಟರ್, ಸಿಆರ್‌ಪಿ ಮುರುಳಿ, ಉಮಾ ಪಾಟೀಲ, ನಾಗವೇಣಿ ಪಾಟೀಲ, ಘಾಳಮ್ಮ ಸಿಂಧೆ ಮಾತನಾಡಿದರು.

ಸುರೇಶ ಕೊರವಿ, ಜ್ಯೋತಿ ಬೊಮ್ಮಾ ಇದ್ದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಸುಮಂಗಲಾ ದಿಗ್ಗಾಂವ್ ಅಧ್ಯಕ್ಷತೆವಹಿಸಿದ್ದರು.

ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಾಧುರಿ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀನಾಕ್ಷಿ ದಿನ್ನಿ, ಶಾರದಾ ನಿರೂಪಿಸಿದರು. ನೀಲಾ ವಂದಿಸಿದರು. ಇದೇ ವೇಳೆ ಸಂಘದ ಪದಾಧಿಕಾರಿಗಳ ಪದಗ್ರಹಣ ಪ್ರಯುಕ್ತ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT