ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂಚೋಳಿ | ಸಂಗಾಪುರದಲ್ಲಿ ವ್ಯಕ್ತಿಯ ಕೊಲೆ

Published 29 ಜೂನ್ 2024, 9:28 IST
Last Updated 29 ಜೂನ್ 2024, 9:28 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸಂಗಾಪುರ ಗ್ರಾಮದ ಹೊರ ವಲಯದ ಹೊಲದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.

ಗ್ರಾಮದ ಬೊಲೆರೊ ಚಾಲಕ ಗೋಪಾಲ ಪವಾರ್ (48) ಕೊಲೆಯಾದವರು.

ಶನಿವಾರ ಸಂಜೆ ಹೊಲಕ್ಕೆ ಹೋದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಪ್ರಕರಣ ಮುಚ್ಚಿಹಾಕಲು ಮರಕ್ಕೆ ನೇಣು ಹಾಕಿದ್ದಾರೆ. ಹಗ್ಗ ಕಡಿದು ಶವ ನೆಲದ ಮೇಲೆ ಬಿದ್ದಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಮೃತನ ಕುಟುಂಬದವರು 16 ಮಂದಿ ವಿರುದ್ಧ ದೂರು ಸಲ್ಲಿಸಿದ್ದು, ಕುಂಚಾವರಂ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.‌

ಹಿರಿಯ ಪೊಲೀಸ್ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಕಲಬುರಗಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT