ಚಿಂಚೋಳಿ: ‘ಐನೋಳ್ಳಿ ಚಂದ್ರಂಪಳ್ಳಿ ಮಾರ್ಗದಲ್ಲಿರುವ ನನ್ನ ತೋಟದಲ್ಲಿ 6 ಎಕರೆಯಲ್ಲಿ ಟೊಮೆಟೊ ಬೆಳೆಸಿದ್ದೇನೆ. ಕಳೆದ ಒಂದು ವಾರದಿಂದ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಬೆಳೆ ಬಾಡಿ ಬಸವಳಿದಿದೆ’ ಎಂದು ಐನೋಳ್ಳಿಯ ರೈತ ಶಿವರಾಜ ತಳವಾರ ಅಳಲು ತೋಡಿಕೊಂಡಿದ್ದಾರೆ.

‘ಹೂವು ಹಾಗೂ ಕಾಯಿ ಹಂತದಲ್ಲಿರುವ ಬೆಳೆ ನೀರಿನ ಕೊರತೆಯಿಂದ ಒಣಗುತ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ ಟೊಮೆಟೊ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಷ್ಟಕ್ಕೊಳಗಾಗಿದ್ದೇನೆ. ಕಳೆದ 15 ದಿನಗಳಿಂದ ವಿದ್ಯುತ್ ಪೂರೈಕೆಯೇ ಇಲ್ಲ. ಇದರಿಂದ ತೋಟದಲ್ಲಿನ ಬೆಳೆಗಳಿಗೆ ನೀರಿಲ್ಲದಂತಾಗಿದೆ’ ಎಂದು ದೂರಿದ್ದಾರೆ.

‘ಸದ್ಯ ಪ್ರಖರ ಬಿಸಿಲಿನ ಹೊಡೆತ ಹಾಗೂ ನೀರಿನ ಕೊರತೆ, ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದರಿಂದ 6 ಎಕರೆಯಲ್ಲಿ ಕನಿಷ್ಠ ₹4 ರಿಂದ 5ಲಕ್ಷ ಹಾನಿ ಉಂಟಾಗಿದೆ. ಬೇಗ ವಿದ್ಯುತ್ ಪೂರೈಸಿದರೆ ಭಾಗಶಃ ನಷ್ಟ ತಪ್ಪಿಸಬಹುದಾಗಿದೆ’ ಎಂದು ಒತ್ತಾಯಿಸಿದ್ದಾರೆ.

ಐಪಿ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಪೂರೈಕೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಲ್ಲಾ ಊರುಗಳಲ್ಲೂ ವಿದ್ಯುತ್ ಪೂರೈಕೆ ಅಸಮರ್ಪಕವಾದ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದ ಬಗ್ಗೆ ಹಲವಾರು ರೈತರು ಹಾಗೂ ಸಾರ್ವಜನಿಕರು ದೂರಿದ್ದಾರೆ. ಶೀಘ್ರವೇ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳುವುದಾಗಿ ಶಾಸಕ ಡಾ.ಅವಿನಾಶ ಜಾಧವ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-31-532848893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.