ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂಚೋಳಿ: ಜಲಾಶಯಗಳಿಂದ ನೀರು ಬಿಡುಗಡೆ

Last Updated 4 ಆಗಸ್ಟ್ 2022, 9:37 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ.

ನಿರಂತರ ಮಳೆ ಸುರಿಯುತ್ತಿರುವ ಕಾರಣ ಜಲಾಶಯಗಳಲ್ಲಿ‌ ಒಳ ಹರಿವು ಹೆಚ್ಚಾಗಿದೆ.

ಚಂದ್ರಂಪಳ್ಳಿ ಮತ್ತು ನಾಗರಾಳ‌ ಜಲಾಶಯಗಳಿಂದ ನೀರು ನದಿಗೆ ಬಿಡಲಾಗಿದೆ. ನಿರಂತರ ಮಳೆಯಿಂದ ನದಿ, ನಾಲಾ, ತೊರೆಗಳು ತುಂಬಿ ಹರಿಯುತ್ತಿವೆ.

ನಾಗರಾಳ ಜಲಾಶಯಕ್ಕೆ 1,100 ಕ್ಯುಸೆಕ್ ಒಳಹರಿವು ಹೆಚ್ಚಾಗಿದ್ದರಿಂದ 1289 ಕ್ಯುಸೆಕ್ ನೀರು ನದಿಗೆ ಬಿಡಲಾಗಿದೆ ಎಂದು ಎಇಇ ಹಣಮಂತ ಪೂಜಾರಿ ತಿಳಿಸಿದರು.

ಚಂದ್ರಂಪಳ್ಳಿ ಜಲಾಶಯಕ್ಕೆ 474 ಕ್ಯುಸೆಕ್ ಒಳ ಹರಿವಿದೆ. ಜಲಾಶಯದಿಂದ 874 ಕ್ಯುಸೆಕ್ ನೀರು ನದಿಗೆ ಬಿಡಲಾಗಿದೆ ಎಂದು ಎಇಇ ಚೇತನ ಕಳಸ್ಕರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT