ಚಿಂಚೋಳಿ: ‘ಪಟ್ಟಣದ ಅಣವಾರ ಕ್ರಾಸ್ ಬಳಿಯಿರುವ ರೇವಣಸಿದ್ದೇಶ್ವರ ಪಾದಗಟ್ಟಿಯಲ್ಲಿ ಮೇ 25ರಂದು ಬೆಳಿಗ್ಗೆ 10 ಗಂಟೆಗೆ ರೇಣುಕಾಚಾರ್ಯರ ಜಯಂತ್ಯುತ್ಸವ ಹಾಗೂ ಪಂಚಾಚಾರ್ಯರ ಯುಗಮಾನೋತ್ಸವ ಮತ್ತು ಬಸವೇಶ್ವರರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ನಿಡಗುಂದಾದದ ಕರುಣೇಶ್ವರ ಶಿವಾಚಾರ್ಯರು ತಿಳಿಸಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಜ್ಜಯಿನಿಯ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು, ಶ್ರೀಶೈಲದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಸನ್ನಿಧಾನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಆಲೂರಿನ ಕೆಂಚವೃಷಭೇಂದ್ರ ಶಿವಾಚಾರ್ಯರು, ಸಾಂಬ ಸಲಗರನ ದ್ವಿತೀಯ ಸಾಂಬ ಶಿವಾಚಾರ್ಯರು, ನಿಡಗುಂದಾದ ಕರುಣೇಶ್ವರ ಶಿವಾಚಾರ್ಯರು, ಚಂದನಕೇರಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ವಹಿಸಲಿದ್ದಾರೆ‘ ಎಂದು ಹೇಳಿದರು.

‘ಕಾರ್ಯಕ್ರವನ್ನು ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಈಶ್ವರ್ ಖಂಡ್ರೆ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಅವಿನಾಶ ಜಾಧವ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಸಾಗರ ಖಂಡ್ರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಸೇರಿದಂತೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಜಂಗಮ ವಟುಗಳಿಗೆ ಅಯ್ಯಾಚಾರ ಹಾಗೂ ಭಕ್ತರಿಗೆ ಲಿಂಗ ದೀಕ್ಷೆ ನೀಡಲಾಗುವುದು. ಶ್ರೀಗಳಿಗೆ ಮೌನೇಶ್ವರ ಮಂದಿರದಿಂದ ಪಾದಗಟ್ಟಿವರೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಗುವುದು. ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

ಸ್ವಾಗತ ಸಮಿತಿ ಅಧ್ಯಕ್ಷ ಸಂಗಯ್ಯಸ್ವಾಮಿ ಅಣವಾರ, ವೀರೇಶ ಯಂಪಳ್ಳಿ, ವೀರಶೆಟ್ಟಿ ಪಾಟೀಲ, ವೀರಣ್ಣ ಗಂಗಾಣಿ, ಗುಂಡಯ್ಯಸ್ವಾಮಿ, ಮಹಾಂತೇಶ ಮಠಪತಿ, ಬಸವರಾಜ ದೇಶಮುಖ, ಶಿವಬಸಯ್ಯಸ್ವಾಮಿ ಸೇರಿದಂತೆ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-31-1543735200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.