ಚಿಂಚೋಳಿ: ‘ರೇವಗ್ಗಿಯ ರೇವಣಸಿದ್ದೇಶ್ವರ ದೇವಾಲಯ ಅಭಿವೃದ್ಧಿ ಹಾಗೂ ಯಾತ್ರಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ರೇವಣಸಿದ್ದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು’ ಶಾಸಕ ಡಾ.ಅವಿನಾಶ ಜಾಧವ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ.

ಬಜೆಟ್ನಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಅನುದಾನದ ನಿರೀಕ್ಷೆ ಹುಸಿಯಾಗಿದೆ. ಸರ್ಕಾರ ಗ್ಯಾರಂಟಿ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ರೈತರಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಸಿಗುತ್ತಿಲ್ಲ. ಗ್ರಾಮ, ತಾಂಡಾ ಮತ್ತು ಹೊಸ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಚಿಂಚೋಳಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶವಿದ್ದು, ಇದಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಪಬ್ಲಿಕ್ ಶಾಲೆ ತೆರೆದಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ ಆದರೆ 18 ಸಾವಿರ ಶಿಕ್ಷಕರ ನೇಮಕ ಕಾಗದದಲ್ಲಿಯೇ ಇದೆ, ಅದು ಅನುಷ್ಠಾನಕ್ಕೆ ಬರಬೇಕು. ಕೆಕೆಆರ್ಡಿಬಿ ಪ್ರಾದೇಶಿಕ ಅಸಮತೋನ ನಿವಾರಣೆ ಅಸ್ತಿತ್ವಕ್ಕೆ ಬಂದಿದೆ. ಆದರೆ ಈ ಭಾಗಕ್ಕೆ ಬಜೆಟ್ನಲ್ಲಿ ಇಲಾಖಾ ಅನುದಾನದ ಜತೆಗೆ ಹೆಚ್ಚುವರಿಯಾಗಿ ಕೆಕೆಆರ್ಡಿಬಿ ಅನುದಾನ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-31-1285606226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.