ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಕುರಿತು ಜಾಗೃತಿ ಮೂಡಿಸಿ

ಸಾಮಾನ್ಯ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರೇಣುಕಾ ಸೂಚನೆ
Last Updated 17 ಏಪ್ರಿಲ್ 2021, 8:53 IST
ಅಕ್ಷರ ಗಾತ್ರ

ಚಿಂಚೋಳಿ: ‘ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಅದರ ಹತೋಟಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯವರು ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ ಸೂಚಿಸಿದರು.

ಇಲ್ಲಿನ ಚಂದಾಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನ ರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

‘ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯು ಈಗಾಲೇ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಇದಕ್ಕೆ ಪೂರಕವಾಗಿ ಸಾರ್ವಜನಿಕರ ಸಹಕಾರವೂ ಮುಖ್ಯ. ತಾಲ್ಲೂಕಿನಲ್ಲಿ ಈವರೆಗೆ 18,790 ಜನರಿಗೆ ಲಸಿಕೆ ಹಾಕಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಹಮ್ಮದ್ ಗಫಾರ ತಿಳಿಸಿದರು.

‘ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಬೇಕಿದೆ. ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಬಗೆಹರಿಬೇಕು. ನಿರಂತರವಾಗಿ ವಿದ್ಯುತ್‌ ಪೂರೈಸಬೇಕು’ ಕಾರ್ಯನಿರ್ವಾಹಕ ಅಧಿಕಾರಿ ಅನಿಲ ರಾಠೋಡ ಅವರು ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ, ಸ್ಥಾಯಿ‌ ಸಮಿತಿ ಅಧ್ಯಕ್ಷ ಚಿರಂಜಿವಿ‌ ಪಾಪಯ್ಯ, ಯೋಜನಾಧಿಕಾರಿ ಶಂಕರ ರಾಠೋಡ್ ಮಾತನಾಡಿದರು.

ಪಂಚಾಯತ್ ರಾಜ್ ಇಲಾಖೆಯ ಎಇಇ ಅಹೆಮದ ಹುಸೇನ, ಕ್ಷೇತ್ರಶಿಕ್ಷಣಾಧಿಕಾರಿ ನಾಗಶೆಟ್ಟಿ ಭದ್ರಶೆಟ್ಟಿ, ಮಹಮ್ಮದ ಹುಸೇನ್ ನೈಕೋಡಿ, ಜಗನ್ನಾಥ‌ ಈದಲಾಯಿ, ಹಣಮಂತರಾವ ರಾಜಗಿರಾ ಮತ್ತು ರಾಜೇಂದ್ರ ಗೋಸುಲ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT