ಚಿಂಚೋಳಿ: ‘ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ರ 5 ವರ್ಷ ಅವಧಿಗಾಗಿ ಕಾರ್ಯಕಾರಿಣಿ ಸದಸ್ಯರ ಆಯ್ಕೆಗೆ ಏ.19ರಂದು ಚುನಾವಣೆ ನಡೆಯಲಿದೆ’ ಎಂದು ಚುನಾವಣಾಧಿಕಾರಿ ಪ್ರೇಮನಾಥ ಬಿರಾದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ರೇವಣಸಿದ್ದಪ್ಪ ದಂಡಿನ ತಿಳಿಸಿದ್ದಾರೆ.

ಚಿಂಚೋಳಿಯ ಸರ್ಕಾರಿ ನೌಕರರ ಭವನದಲ್ಲಿ ಏ.11ರಿಂದ ನಾಮಪತ್ರ ಸ್ವೀಕಾರ ನಡೆಯಲಿದೆ. ಏ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏ. 13ರಂದು ಬೆಳಿಗ್ಗೆ 11ಕ್ಕೆ ಪರಿಶೀಲನೆ ಮತ್ತು ಕ್ರಮಬದ್ಧ ನಾಮಪತ್ರಗಳ ಘೋಷಣೆ ಹಾಗೂ ಏ.14 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನನಾಗಿದೆ. ಏ.14ರಂದು ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ, ಏ.19ರಂದು ಬೆಳಿಗ್ಗೆ 8.30ರಿಂದ ಸಂಜೆ 4.30ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 6.30ರಿಂದ ಮತಗಳ ಎಣಿಕೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-31-567635038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.