ಚಿಂಚೋಳಿ: ‘ಬೇಸಿಗೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಅಂತರ್ಜಲಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದರಿಂದ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆಯಿದ್ದು, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಅವಿನಾಶ ಜಾಧವ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ತಾಲ್ಲೂಕು ಆಡಳಿತ ಸೌಧದಲ್ಲಿ ನಡೆದ ಅಭಾವ ಪರಿಹಾರದ ಕಾರ್ಯಪಡೆ ಹಾಗೂ ಗ್ರಾ.ಪಂ ಪಿಡಿಒಗಳ ಸಭೆಯಲ್ಲಿ ಅವರು ಕುಡಿಯುವ ನೀರಿನ ಸಮಸ್ಯೆ ಆಲಿಸಿ ಕೈಗೊಂಡ ಪರಿಹಾರ ಕ್ರಮಗಳ ಮಾಹಿತಿ ಪಡೆದು ನಂತರ ಮಾತನಾಡಿದರು.

‘ತಾಲ್ಲೂಕಿನ ಬಾವನಗುಡಿ ಕೋಕು ನಾಯಕ ತಾಂಡಾದಲ್ಲಿ ಕೊಳವೆಬಾವಿ ಕೊರೆಯಿಸಲಾಗಿದೆ. ಆದರೆ, ಕಳೆದ 3 ವರ್ಷಗಳಿಂದ ಮೋಟಾರ್ ಆಳವಡಿಸಲು ಆಗಿಲ್ಲ. ಕ್ರಿಯಾಯೋಜನೆಯಲ್ಲಿ ಮೋ ಟಾರ್ ಅಳವಡಿಸಲು ಸೇರಿಸಿದರೂ ಕೊನೆ ಗಳಿಗೆಯಲ್ಲಿ ಕೈಬಿಡಲಾಗಿದೆ. ಇದರಿಂದ ಕ್ರಿಯಾಯೋಜನೆ ಅನುಮೋದನೆ ಸಿಕ್ಕಿಲ್ಲ’ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು.

‘ಇದರ ಜತೆಗೆ ಯಲಮಾಮಡಿ ಮೋನುನಾಯಕ ತಾಂಡಾಕ್ಕೆ ಕಳೆದ ವರ್ಷ ಕೊಳವೆಬಾವಿ ಬಾಡಿಗೆಗೆ ಪಡೆದರೂ ಮಾಲೀಕನಿಗೆ ಬಾಡಿಗೆ ಹಣ ಏಕೆ ನೀಡಿಲ್ಲ?’ ಎಂದು ಶಾಸಕರು ಅಧಿಕಾರಿಗಳನ್ನು ಪ್ರಶ್ನಿಸಿದರು.

‘ಕುಸ್ರಂಪಳ್ಳಿಗೆ ಎರಡು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಬೆನಕಪಳ್ಳಿಯಲ್ಲಿ ಕೊಳವೆಬಾವಿ ಬಾಡಿಗೆಗೆ ಪಡೆಯಲಾಗಿದೆ. ಕೆಕೆಆರ್ಡಿಬಿ, ಎಸ್ಸಿಎಸ್ಪಿ ಅಡಿಯಲ್ಲಿ ಧರ್ಮಾಸಾಗರ, ಚಾಪ್ಲಾನಾಯಕ ತಾಂಡಾ ಪಸ್ತಪುರ ತಾಂಡಾ, ರೋಹಿಲಾ ತಾಂಡಾ, ಖೂನಿ ತಾಂಡಾ, ಕುಸ್ರಂಪಳ್ಳಿ, ರಾಣಾಪುರ ತಾಂಡಾ, ಮೋತಿಮೋಕ, ಕಲಭಾವಿ ಮೊದಲಾದ ಕಡೆ ಕಾಮಗಾರಿ ಕೈಗೊಳ್ಳಲು ಅಂದಾಜು ಪಟ್ಟಿ ಸಲ್ಲಿಸಲಾಗಿದೆ’ ಎಂದು ಸಹಾಯಕ ಎಂಜಿನಿಯರ್ ಯುವರಾಜ ರಾಠೋಡ ತಿಳಿಸಿದರು.

ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾ.ಪಂ ಇಒ ಸಂತೋಷ ಚವ್ಹಾಣ, ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆಯ ಎಇಇ ಉಮೇಶ ರಾಠೋಡ, ನೀರಾವರಿ ಇಲಾಖೆಯ ಎಇಇ ಶಿವಾಜಿ ಜಾಧವ, ಅಮೃತ ಪವಾರ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-31-323850573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.