ಚಿತ್ತಾಪುರ: ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ವತಿಯಿಂದ ಶನಿವಾರ ಪಟ್ಟಣದಲ್ಲಿ ಅದ್ದೂರಿ ಬುದ್ಧ ಮತ್ತು ಅಂಬೇಡ್ಕರ್ ಪುತ್ಥಳಿಯ ಮೆರವಣಿಗೆ ಜರುಗಿತು.

ಮೆರವಣಿಗೆಯಲ್ಲಿ ಡಿಜೆ ಹಾಡುಗಳಿಗೆ ಯುವಕರು ಕುಣಿದು ಕುಪ್ಪಳಿಸಿದರು. ಧಮ್ಮಚಕ್ರ ನೀಲಿ ಧ್ವಜ ಮತ್ತು ಪಂಚಶೀಲ ಧ್ವಜ ಮೆರವಣಿಗೆಯಲ್ಲಿ ರಾರಾಜಿಸಿದವು.

ಪಟ್ಟಣದ ಅಂಬೇಡ್ಕರ್ ನಗರದಿಂದ ಬಸ್ ನಿಲ್ದಾಣ, ಬಸವೇಶ್ವರ ಮೂರ್ತಿ ಮಾರ್ಗವಾಗಿ ಸ್ಟೇಷನ್ ಏರಿಯಾ, ನಾಗಾವಿ ಚೌಕ್ ಮೂಲಕ ಡಾ.ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ಡಾ.ಅಂಬೇಡ್ಕರ್ ಪುತ್ಥಳಿಗೆ ಕಾಂಗ್ರೆಸ್ ಹಿರಿಯ ಮುಖಂಡ ನಾಗರೆಡ್ಡಿ ಪಾಟೀಲ ಕರದಾಳ ಮಾಲಾರ್ಪಣೆ ಮಾಡಿದರು. ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಮೆರವಣಿಗೆಗೆ ಚಾಲನೆ ನೀಡಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣಾ ಸಾಲಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ಪಿಎಸ್ಐ ಮಂಜುನಾಥ ರೆಡ್ಡಿ, ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್, ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್, ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್, ಮಲ್ಲಿಕಾರ್ಜುನ ಕಾಳಗಿ, ಶ್ರೀಕಾಂತ ಸಿಂಧೆ, ಮಲ್ಲಿಕಾರ್ಜುನ ಎಸ್. ಮುಡಬೂಳಕರ್, ಉದಯಕುಮಾರ ಸಾಗರ, ಉದಯಕುಮಾರ ಸಾಗರ, ಹಣಮಂತ ಸಂಕನೂರು, ಶಿವರಾಜ ಕಲ್ಲಕ್, ವಿಜಯಕುಮಾರ ದೊಡ್ಡಮನಿ, ದೇವಿಂದ್ರ ಕುಮಸಿ, ಸಂಜಯ ಬುಳಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-31-1338216053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.