ಚಿತ್ತಾಪುರ: ‘ಬಸವೇಶ್ವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಸವ ಭವನ ನಿರ್ಮಾಣಕ್ಕೆ ಅಗತ್ಯ ತಯಾರಿ ಮಾಡಲಾಗುತ್ತಿದ್ದು, ಭವನದ ಅಂತಿಮ ರೂಪುರೇಷೆ ಸಿದ್ಧಪಡಿಸುವ ಕುರಿತು ಚರ್ಚಿಸಲು ಮಾ.29 ರಂದು ಬೆಳಿಗ್ಗೆ 10 ಗಂಟೆಗೆ ಪೂರ್ವಸಿದ್ಧತಾ ಸಭೆ ಕರೆಯಲಾಗಿದೆ’ ಎಂದು ಟ್ರಸ್ಟ್ನ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದಲ್ಲಿ ಗುರುವಾರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಸವ ಭವನ ನಿರ್ಮಾಣ ಮಾಡುವ ಉದ್ದೇಶದಿಂದ ಹೊರವಲಯದ ಶಹಾಬಾದ್ ರಸ್ತೆಯಲ್ಲಿ ಎರಡು ಎಕರೆ ಜಮೀನು ಖರೀದಿಸಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಇದೇ ಜಮೀನಿನ ಆವರಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಭವನದಿಂದ ನಿರಂತರ ಆದಾಯ ಬರುವಂತೆ ಯೋಜನೆ ರೂಪಿಸಲಾಗುತ್ತಿದೆ. ಭವನದಿಂದ ಬರುವ ಆದಾಯದಲ್ಲಿ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ವಸತಿ ನಿಲಯ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ವಸತಿನಿಲಯ ಕೊಠಡಿ ನಿರ್ಮಾಣಕ್ಕಾಗಿ ₹2 ಲಕ್ಷ ದೇಣಿಗೆ ನೀಡುವವರ ಹೆಸರುಗಳನ್ನು ಕೊಠಡಿಗಳಿಗೆ ಇಡಲಾಗುವುದು’ ಎಂದು ತಿಳಿಸಿದರು.

‘ಬಸವ ಭವನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಸರ್ಕಾರದಿಂದ ₹50 ಲಕ್ಷ ಅನುದಾನ ಮಂಜೂರಾಗಿದೆ. ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಸಲಹೆ, ಸೂಚನೆಗಳನ್ನು ನೀಡಬೇಕು’ ಎಂದರು.

ಟ್ರಸ್ಟ್ ಉಪಾಧ್ಯಕ್ಷ ಡಾ.ಪ್ರಭುರಾಜ ಕಾಂತಾ, ಕಾರ್ಯದರ್ಶಿ ನಾಗರಾಜ ಭಂಕಲಗಿ ಮಾತನಾಡಿದರು. ಟ್ರಸ್ಟ್ ಪದಾಧಿಕಾರಿ ಅಣ್ಣಾರಾವ್ ಪಾಟೀಲ ಮುಡಬೂಳ, ಅಶೋಕ ನಿಪ್ಪಾಣಿ, ಅನಿಲ ವಡ್ಡಡಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-31-191295414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.