ಚಿತ್ತಾಪುರ: ‘ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ದೇವಿಂದ್ರ ಎಂ.ಅರಣಕಲ್ ತಿಳಿಸಿದ್ದಾರೆ.

ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಮುಂಗಾರು ಬಿತ್ತನೆಗೆ ರೈತರು ತರಾತುರಿ ಮಾಡಬಾರದು. ಮುಂಗಾರು ಮಳೆಗಾಲ ಶುರುವಾಗಲು ಇನ್ನೂ ಒಂದು ವಾರ ಬಾಕಿಯಿದ್ದು, ಅದಕ್ಕೂ ಮುಂಚೆ ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕೃಷಿ ಪರಿಕರ ಮಾರಾಟ ಮಾಡುವ ಮಳಿಗೆಗಳಿಂದ ನಿಗದಿತ ದರಕ್ಕಿಂತ ದುಬಾರಿ ಬೆಲೆಗೆ ರಸಗೊಬ್ಬರ ಖರೀದಿಸಬಾರದು’ ಎಂದು ಕೋರಿದ್ದಾರೆ.

‘ರಸಗೊಬ್ಬರ ಸಿಗುತ್ತದೆಯೋ.. ಇಲ್ಲವೋ.. ಎಂದು ತಾಲ್ಲೂಕಿನ ರೈತರು ಬೇರೆ ತಾಲ್ಲೂಕು, ದೂರದ ನಗರ ಪಟ್ಟಣಗಳಿಗೆ ಹೋಗಿ ಹೆಚ್ಚಿನ ಬೆಲೆಕೊಟ್ಟು ರಸಗೊಬ್ಬರ ಖರೀದಿಸಬಾರದು. ರೈತರಿಗೆ ಅಗತ್ಯ ರಸಗೊಬ್ಬರ ಪೂರೈಸಲು ಕೃಷಿ ಇಲಾಖೆಯೂ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ರೈತರು ರಸಗೊಬ್ಬರಕ್ಕೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅರಣಕಲ್ ಅವರು ಸ್ಪಷ್ಟಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-337945002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.