ವಾಡಿ: ‘ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದರೂ ಆಡಳಿತ ನಿರ್ಲಕ್ಷ್ಯವಹಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒ ಗೋಪಾಲ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿ ಶುದ್ಧ ಕುಡಿಯುವ ನೀರಿಗೆ ಅಗ್ರಹಿಸಿದರು.

ಈಚೆಗೆ ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಸ್ಥಳೀಯರು, ಗ್ರಾಮದ ವಾರ್ಡ್ ನಂ–1, 2ರಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಬೋರ್ವೆಲ್ ಮತ್ತು ಬಾವಿ ಅರಸುತ್ತಾ ಹೋಗುತ್ತಿದ್ದಾರೆ. ಹಾಗಾಗಿ ನೀರಿನ ಸಮಸ್ಯೆಯನ್ನು ಕೂಡಲೇ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ಮುಖಂಡ ಗೌತಮ ಪರ್ತುರಕರ, ‘ವಾರ್ಡ್ ನಂ–1, 2ರಲ್ಲಿ ಕಳೆದ ಒಂದು ತಿಂಗಳಿಂದ ನೀರಿನ ಹಾಹಾಕಾರ ಉಂಟಾಗಿದ್ದು, ಸ್ಥಳೀಯ ಪಂಚಾಯಿತಿಯೂ ನಿರ್ಲಕ್ಷ್ಯವಹಿಸಿದೆ. ಬೋರ್ವೆಲ್ ದುರಸ್ತಿ ನೆಪದಲ್ಲಿ ತಿಂಗಳುಗಟ್ಟಲೇ ಕಾಲಹರಣ ಮಾಡುತ್ತಿದ್ದು, ಜನರು ಗೋಳಾಡುತ್ತಿದ್ದಾರೆ. ತಕ್ಷಣ ಸಮಸ್ಯೆ ಪರಿಹರಿಸದಿದ್ದರೆ ಗ್ರಾ.ಪಂ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕೃಷಿ ಕಾರ್ಮಿಕ ಸಂಘಟನೆಯ ಹಲಕರ್ಟಿ ಗ್ರಾಮ ಘಟಕದ ಕಾರ್ಯದರ್ಶಿ ಸಾಬಣ್ಣ ಸುಣಗಾರ, ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ವಾಡಿ ಸಮಿತಿಯ ಕಾರ್ಯದರ್ಶಿ ಶರಣು ಹೇರೂರ್, ಸದಸ್ಯರಾದ ಮಹಾಂತೇಶ ಹುಳಗೊಳ, ಚೌಡಪ್ಪ ಗಂಜಿ, ವೀರೇಶ ನಾಲವಾರ, ಗ್ರಾಮಸ್ಥರಾದ ನಿಂಗಣ್ಣ ಹಿರಗೊಂಡ, ಭೀಮರಾಯ ಅಳ್ಳೋಳಿ , ಸಾಬಣ್ಣ ನಾಲಡಗಿ, ಬಸಣ್ಣ ಸುಣಗಾರ, ಸಿದ್ರಾಮ ಛತ್ರಿಕಿ, ಮೆಹಬೂಬ್ ನದಾಪ್, ಅನ್ನು ಪಟೇಲ್, ರಾಜು ಸುಗೂರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-31-217713448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.