ಚಿತ್ತಾಪುರ: ‘ಮಹಿಳೆ ಎಂದರೆ ಕರುಣೆ, ಮನೆಯ ಜ್ಯೋತಿ, ಮಮತೆಯ ಸಾಕಾರಮೂರ್ತಿ. ಮಹಿಳೆಯರಿಂದ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಮತ್ತು ಜೀವನ ಪಾಠ ಲಭಿಸುತ್ತದೆ’ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದಲ್ಲಿನ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ತಾಲ್ಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮನೆಯಲ್ಲಿ ಮಕ್ಕಳಿಗೆ ಜೀವನದ ಮಾರ್ಗ ತೋರುವ ತಾಯಿಯೆ ಮೊದಲ ಶಿಕ್ಷಕಿ. ಪ್ರಾಚೀನ ಕಾಲದಿಂದಲೂ ದೇಶದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಶಿಕ್ಷಣ ಪಡೆದ ಮಹಿಳೆಯರು ಇಂದು ಸರ್ಕಾರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಪಾಲಕ ಮಕ್ಕಳಲ್ಲಿ ಹೆಣ್ಣು–ಗಂಡು ಎಂದು ಭೇದ ತೋರದೆ ಇಬ್ಬರಿಗೂ ಸಮಾನ ಅವಕಾಶಗಳನ್ನು ದೊರಕಿಸಿಕೊಡಬೇಕು’ ಎಂದರು.

ವಕೀಲೆ ಶರಣಮ್ಮ ಮಾತನಾಡಿ, ‘ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ಕೀಳಾಗಿ ಕಾಣುವ ಮನಸ್ಥಿತಿ ಇಂದಿಗೂ ಜೀವಂತವಿದೆ. ಗಂಡು ಮಗು ಜನಿಸಿದಾಗ ಹೆತ್ತವರು ಎಷ್ಟು ಸಂಭ್ರಮ ಪಡುತ್ತಾರೋ ಅಷ್ಟೇ ಸಂಭ್ರಮ ಹೆಣ್ಣು ಮಗು ಜನಿಸಿದಾಗಲೂ ಸಂಭ್ರಮ ಪಡಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆರುತಿ ತುಪ್ಪದ, ವಕೀಲರ ಸಂಘದ ಅಧ್ಯಕ್ಷ ಸೋಮಶೇಖರ ಬಿ.ಕರದಳ್ಳಿ, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ, ಅಂಗನವಾಡಿ ಹಿರಿಯ ಮೇಲ್ವಿಚಾರಕಿ ಗೀತಾ ಯಡ್ರಾಮಿ, ಶೀಲಾ ಅರಸ್, ಸರಾನ್ ದೊಡ್ಡಮನಿ, ರಮಾಬಾಯಿ, ಸುನಿತಾ, ಶೋಭಾ, ಕವಿತಾ ಪಾಟೀಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-31-2079987440

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.