ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಯಾವ ದಿನ–ಸಮಯಕ್ಕೆ ನಡೆಯಲಿದೆ ಎಂಬ ಕುತೂಹಲಕ್ಕೆ ಗುರುವಾರ ತೆರೆ ಬೀಳುವ ನಿರೀಕ್ಷೆಗಳಿದ್ದು, ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.

ಅ.19ರಂದು ಪಥಸಂಚಲನ ನಡೆಸಲು ಆರ್ಎಸ್ಎಸ್ಗೆ ಅನುಮತಿ ನಿರಾಕರಿಸಿದ್ದ ಚಿತ್ತಾಪುರ ತಹಶೀಲ್ದಾರರ ಕ್ರಮ ಪ್ರಶ್ನಿಸಿ ಆರ್ಎಸ್ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್ ಮೊರೆಹೋಗಿದ್ದರು. ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕಸದಸ್ಯ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದೆ.

‘ಆರ್ಎಸ್ಎಸ್ ಸೇರಿ ಮನವಿ ಸಲ್ಲಿಸಿರುವ ಎಲ್ಲ ಸಂಘಟನೆಗಳಿಗೂ ಒಂದು ವಾರದೊಳಗೆ ಪಥಸಂಚಲನ/ಮೆರವಣಿಗೆಗೆ ಅನುಮತಿ ನೀಡಲಾಗುವುದು. ಈ ಬಗ್ಗೆ ಸಂಘಟನೆಗಳಿಗೆ ಲಿಖಿತವಾಗಿ ತಿಳಿಸಲಾಗುವುದು’ ಎಂದು ನ.7ರಂದು ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದರಂತೆ ಗುರುವಾರದ ಸರ್ಕಾರ ತನ್ನ ನಿರ್ಧಾರವನ್ನು ಕೋರ್ಟ್ಗೆ ತಿಳಿಸುವ ಸಾಧ್ಯತೆ ಇದೆ. ಆರ್ಎಸ್ಎಸ್ ಸೇರಿ ಎಲ್ಲ 11 ಸಂಘಟನೆಗಳಿಗೆ ಯಾವ ದಿನ ಅವಕಾಶ ಕೊಡಲಿದೆ ಎಂಬ ಬಗ್ಗೆ ಕುತೂಹಲ ಮೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.