ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ
ಆರ್‌ಎಸ್‌ಎಸ್ ಪಥಸಂಚಲನ ಕುರಿತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕಲಬುರಗಿ ಪೀಠ ಅಕ್ಟೋಬರ್ 24ರಂದು ಮಧ್ಯಾಹ್ನ ನಡೆಸಲಿದೆ.
ಚಿತ್ತಾಪುರದಲ್ಲಿ ಅಕ್ಟೋಬರ್ 19ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ, ಅದೇ ದಿನ ಮೆರವಣಿಗೆ ನಡೆಸಲು ಭೀಮ್ ಆರ್ಮಿ ಮತ್ತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಗಳೂ ಅವಕಾಶ ಕೋರಿದ್ದವು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಕಾರಣ ನೀಡಿ, ತಹಶೀಲ್ದಾರರು ಮೂರೂ ಸಂಘಟನೆಗಳಿಗೆ ಅನುಮತಿ ನಿರಾಕರಿಸಿದ್ದರು.
ಇದನ್ನು ಪ್ರಶ್ನಿಸಿ ಆರ್‌ಎಸ್‌ಎಸ್ ಮುಖಂಡ ಅಶೋಕ ಪಾಟೀಲ ಅವರು ಅ.19ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕಲಬುರಗಿ ಪೀಠವು, ಹೊಸದಾಗಿ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಪಥಸಂಚಲನ ಕುರಿತು ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ನಿರ್ದೇಶಿಸಿ, ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು.