ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಕಸ ವಿಂಗಡಣೆಗೆ ಕಾಳಜಿ ವಹಿಸಿ

ಜಾಗೃತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಮೋನಾ ರೋತ್‌ ಮನವಿ
Last Updated 25 ಡಿಸೆಂಬರ್ 2021, 13:12 IST
ಅಕ್ಷರ ಗಾತ್ರ

ಕಲಬುರಗಿ: ‘ನಾವು ನಮ್ಮ ಮನೆಯಲ್ಲಿ ಉತ್ಪತ್ತಿ ಮಾಡುವ ಕಸವನ್ನು ಬೇರೊಬ್ಬರೇ ಬಂದು ಎತ್ತಬೇಕು ಎಂಬ ಭಾವನೆ ಇಟ್ಟುಕೊಳ್ಳುವುದು ಸರಿಯಲ್ಲ. ಸ್ವಚ್ಛತಾ ಕಾರ್ಯಕ್ಕೆ ಪೌರಕಾರ್ಮಿಕರು ನಿಯೋಜನೆಗೊಂಡಿದ್ದಾರೆ ನಿಜ; ಆದರೆ, ಅವರೊಂದಿಗೆ ಕೈಜೋಡಿಸಿ ಮನೆಯ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಎಲ್ಲರ ಜವಾಬ್ದಾರಿ’ ಎಂದು ಉಪವಿಭಾಗಾಧಿಕಾರಿ ಮೋನಾ ರೋತ್‌ ಕೋರಿದರು.

ಮಹಿಳಾ ಪ್ರಗತಿಪರ ಚಿಂತಕರ ವೇದಿಕೆ ಹಾಗೂ ಸ್ತ್ರೀಶಕ್ತಿ ಒಕ್ಕೂಟದ ಆಶ್ರಯದಲ್ಲಿ ನಗರದಲ್ಲಿ ಶನಿವಾರ ನಡೆದ, ಕಸ ವಿಂಗಡಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಕ್ರಿಸ್‌ಮಸ್‌ ಅಂಗವಾಗಿ ಪೌರಕಾರ್ಮಿಕರಿಗೆ ಸೀರೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಹಸಿಕಸ ಹಾಗೂ ಒಣಕಸ ವಿಂಗಡಣೆ ಮಾಡಿ ಕೊಡುವ ರೂಢಿಯನ್ನು ಪ್ರತಿಯೊಬ್ಬರೂ ಮಾಡಿಕೊಳ್ಳಬೇಕು. ಮಹಾನಗರ ಪಾಲಿಕೆಯಿಂದ ನಗರದ ಸ್ವಚ್ಛತೆಗೆ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಅವುಗಳ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಪೌರಕಾರ್ಮಿಕರ ಆರೋಗ್ಯ ಕಾಳಜಿ ವಹಿಸುವ ದೃಷ್ಟಿಯಿಂದ ಎಲ್ಲರೂ ಕಸ ವಿಲೇವಾರಿ ಕಾಳಕಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜೈನ್ ಸಮಾಜ ಸಂಘಟನೆಯ ಅಧ್ಯಕ್ಷೆ ಶೀತಲ್ ಕುಲಕರ್ಣಿ, ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಡಾ.ಗೀತಾ ಎಸ್.ಪಾಟೀಲ, ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಸಹಾಯಕಿ ಜಾನಕಿ ಎಂ. ಗುದ್ದಿ, ಈಗಲ್ಸ್ ಯೂತ್ ಕ್ಲಬ್‌ನ ಅಧ್ಯಕ್ಷೆ ಆಯ್ಮಾನ್ ತಾಜೀನ್,ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಎ.ಕಡ್ಲಾ ಮಾತನಾಡಿದರು. ವೇದಿಕೆ ಅಧ್ಯಕ್ಷೆ ನಾಗರತ್ನಾ ಬಿ. ದೇಶಮಾನೆ ಅಧ್ಯಕ್ಷತೆ ವಹಿಸಿದ್ದರು.

ಡಾ.ಗೀತಾ ಪಾಟೀಲ ಅವರು ನೀಡಿದ ಸೀರೆ, ಬಟ್ಟೆ ಹಾಗೂ ಬೆಡ್‌ಶೀಟ್‌ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT