ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ದಾಳವಾದ ಪೌರತ್ವ ತಿದ್ದುಪಡಿ ಕಾಯ್ದೆ : ಬಿ.ವೈ.ವಿಜಯೇಂದ್ರ

Last Updated 20 ಡಿಸೆಂಬರ್ 2019, 6:16 IST
ಅಕ್ಷರ ಗಾತ್ರ

ಕಲಬುರ್ಗಿ: ‘ಪೌರತ್ವ ಕಾಯ್ದೆಯನ್ನು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ‌ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ವಿರೋಧಿಸಿ ಹೋರಾಟಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

‘ಪೌರತ್ವ ಕಾಯ್ದೆ ನೆರೆ ರಾಷ್ಟ್ರಗಳಿಂದ ಬಂದವರ ರಕ್ಷಣೆ ಒದಗಿಸುವ ಉದ್ದೇಶ ಹೊಂದಿದೆ. ಸತ್ಯ ಸಂಗತಿ ಗೂತ್ತಿದ್ದರೂ ರಾಜಕೀಯ ದುರುದ್ದೇಶದಿಂದ ಜನತೆಯ ದಾರಿ ತಪ್ಪಿಸಲಾಗುತ್ತಿದೆ. ಜನತೆಯನ್ನು ತಪ್ಪು ದಾರಿಗೆಳೆಯುವುದೂ ದೇಶದ್ರೋಹದ ಕೆಲಸ’ ಎಂದು ಹೇಳಿದರು.

‘ಯಡಿಯೂರಪ್ಪ ಮೊದಲು ಅಧಿಕಾರಕ್ಕೆ ಬಂದಾಗ ಇಬ್ಬರು ರೈತರು ಬಲಿಪಡೆದರು, ಇದೀಗ ಇಬ್ಬರು ಯುವಕರನ್ನು ಬಲಿಪಡೆದಿದ್ದಾರೆ’ ಎಂಬ ಸಿದ್ಧರಾಮಯ್ಯ ಟ್ವೀಟ್‌ಗೆ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

‘ಯಡಿಯೂರಪ್ಪ ರೈತ ಮತ್ತು ಯುವ ವಿರೋಧಿ ಎಂದು ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಅವರ ಆಡಳಿದ ಬಗ್ಗೆ ವಿರೋಧ ಪಕ್ಷಗಳಿಗೆ ಹೇಳಲು ಏನೂ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯ ಈ ರೀತಿ ಹೇಳಿರಬೇಕು’ ಎಂದರು.

ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ವಿಜಯೇಂದ್ರ ಖಂಡಿಸಿದರು. ‘ಪಾಪ ಉಪಚುನಾವಣೆ ನಂತರ ಎಚ್.ಡಿ.ಕೆ ಅಡ್ರೆಸ್‌ಗೂ ಇರಲಿಲ್ಲ. ಈಗ ಮಾತಾಡ್ತಿದ್ದಾರೆ. ಇದಕ್ಕೆ ನಮ್ಮ ನಾಯಕರು ಉತ್ತರ ಕೊಡುತ್ತಾರೆ’ ಎಂದು ವಿಜಯೇಂದ್ರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT