ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸುಸೂತ್ರವಾಗಿ ನಡೆದ ಕಾನ್‌ಸ್ಟೆಬಲ್‌ ಪರೀಕ್ಷೆ

Published 10 ಡಿಸೆಂಬರ್ 2023, 16:08 IST
Last Updated 10 ಡಿಸೆಂಬರ್ 2023, 16:08 IST
ಅಕ್ಷರ ಗಾತ್ರ

ಕಲಬುರಗಿ: ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್‌ (ಪುರುಷ, ಮಹಿಳಾ, ಲಿಂಗತ್ವ ಅಲ್ಪಸಂಖ್ಯಾತರು) ಹಾಗೂ ಸೇವಾ ನಿರತ ಹುದ್ದೆಗಳ ಲಿಖಿತ ಪರೀಕ್ಷೆಯು ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಸುಸೂತ್ರವಾಗಿ ನಡೆಯಿತು.

ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಬೆಳಿಗ್ಗೆ ಪೊಲೀಸ್‌ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ನಡೆಸಿದ ನಂತರ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ನೀಡಿದರು. ಹಾಲ್‌ ಟಿಕೆಟ್‌ ಪರಿಶೀಲಿಸಿದ ಬಳಿಕ ಅಭ್ಯರ್ಥಿಗಳ ಭಾವಚಿತ್ರವನ್ನು ಮತ್ತೊಮ್ಮೆ ತೆಗೆಯಲಾಯಿತು.

ನಿಷೇಧಿತ ಪ್ರದೇಶದಲ್ಲಿ ಮೊಬೈಲ್ ಫೋನ್, ಬ್ಲೂಟೂತ್ ಹಾಗೂ ವೈರ್‌ಲೆಸ್‌ ಸೆಟ್‍ಗಳು ಸೇರಿದಂತೆ ಮತ್ತಿತರ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿತ್ತು. 

ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ್ದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸದಂತೆ ನಿರ್ಬಂಧಿಸಲಾಗಿತ್ತು. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು.

ಪ್ರವೇಶ ದ್ವಾರದಲ್ಲೇ ಅಭ್ಯರ್ಥಿಗಳ ಕೈಯಲ್ಲಿದ್ದ ವಾಚ್, ಕೈಗೆ ಕಟ್ಟಿದ್ದ ದಾರ, ಚಪ್ಪಲಿ ಹಾಗೂ ಕೊರಳಲ್ಲಿನ ಸರ ತೆಗೆಸಲಾಯಿತು. ಕಿವಿ, ಅಂಗಿಯ ಕಾಲರ್ ತಪಾಸಣೆ ಮಾಡಿ ಒಳಬಿಟ್ಟರು.

ಎಸ್‌ಪಿ ಅಡ್ಡೂರು ಶ್ರೀನಿವಾಸಲು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಭದ್ರತೆಯನ್ನು ಪರಿಶೀಲಿಸಿದರು. ತಾವೇ ಕೆಲವು ಅಭ್ಯರ್ಥಿಗಳ ತಪಾಸಣೆ ಸಹ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT