ಕೊಲೆಗೂ ಕಾಂಗ್ರೆಸ್‌ ಪಕ್ಷಕ್ಕೂ ಸಂಬಂಧವಿಲ್ಲ: ಮಾಜಿ ಶಾಸಕ ಬಿ.ಆರ್.ಪಾಟೀಲ ಸ್ಪಷ್ಟನೆ

7

ಕೊಲೆಗೂ ಕಾಂಗ್ರೆಸ್‌ ಪಕ್ಷಕ್ಕೂ ಸಂಬಂಧವಿಲ್ಲ: ಮಾಜಿ ಶಾಸಕ ಬಿ.ಆರ್.ಪಾಟೀಲ ಸ್ಪಷ್ಟನೆ

Published:
Updated:
Deccan Herald

ಕಲಬುರ್ಗಿ: ‘ಆಳಂದ ತಾಲ್ಲೂಕಿನಲ್ಲಿ ಈಚೆಗೆ ನಡೆದ ಕೊಲೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ’ ಎಂದು ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ ಸ್ಪಷ್ಟಪಡಿಸಿದ್ದಾರೆ.

‘ಶಾಸಕ ಸುಭಾಷ ಗುತ್ತೇದಾರ ಅವರು ರಾಜಕೀಯ ಪ್ರೇರಣೆಯಿಂದ ಈ ಆರೋಪ ಮಾಡಿದ್ದಾರೆ. ಕೊಲೆ ಬಗ್ಗೆ ಯಾವುದೇ ರೀತಿಯ ತನಿಖೆಯಾಗಲಿ, ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಶಿಕ್ಷೆ ಆಗಬೇಕು. ಈ ಕೊಲೆ ಹಿಂದೆ ಇರುವವರಿಗೆ ನಾನು ರಕ್ಷಣೆ ನೀಡುತ್ತಿದ್ದೇನೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ’ ಎಂದು ತಿಳಿಸಿದ್ದಾರೆ.

‘ಇಡೀ ಜಿಲ್ಲೆಯಲ್ಲಿ ಅಷ್ಟೆ ಅಲ್ಲ, ಇಡೀ ರಾಜ್ಯದಲ್ಲಿ ನನ್ನ ಹಿನ್ನೆಲೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ಸುಭಾಷ ಗುತ್ತೇದಾರ ಹಿನ್ನೆಲೆ ಏನು ಎಂಬುದು ತಾಲ್ಲೂಕಿನ ಜನತೆಗೆ ಚೆನ್ನಾಗಿ ಗೊತ್ತಿದೆ. ತಾಲ್ಲೂಕಿನಲ್ಲಿ ಅಪರಾಧಿಗಳನ್ನು ಯಾರು ಪೋಷಿಸುತ್ತಿದ್ದಾರೆ ಎಂಬು ಕೂಡ ಎಲ್ಲರಿಗೂ ಗೊತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ದಲಿತು ಅವರಿಗೆ ಬೆಂಬಲ ನೀಡಲಿಲ್ಲ ಎಂಬ ಕಾರಣಕ್ಕಾಗಿ ಈ ಪ್ರಕರಣವನ್ನು ದಾಳವನ್ನಾಗಿ ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಅಪರಾಧಿಗಳು ಯಾರೇ ಆಗಿರಲಿ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಮತ್ತು ತಪ್ಪಿಸ್ಥರಿಗೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !