ಗುರುವಾರ , ಅಕ್ಟೋಬರ್ 1, 2020
20 °C

ಕಲಬುರ್ಗಿ: ಸ್ವಚ್ಛತೆ ಪರಿಶೀಲಿಸಿದ ಪಾಲಿಕೆ ಆಯುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದಲ್ಲಿ ಶುಕ್ರವಾರ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ ಅವರು, ಸ್ವಚ್ಛತೆ ಪರಿಶೀಲಿಸಿದರು.

ಇಲ್ಲಿನ ಕೇಂದ್ರ ಬಸ್ ನಿಲ್ದಾಣ,‌ ಗೋವಾ ಹೋಟೆಲ್, ಸೂಪರ್ ಮಾರ್ಕೆಟ್ ಪ್ರದೇಶಕ್ಕೆ ಭೇಟಿ ನೀಡಿ ಪುಟ್‍ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವ ಸಣ್ಣ ಪುಟ್ಟ ವ್ಯಾಪಾರಿಗಳು ಮತ್ತು ದೊಡ್ಡ ಅಂಗಡಿಗಳ ಮಾಲೀಕರಿಗೆ ತಾಕೀತು ಮಾಡಿದರು.

ರಸ್ತೆಯ ಮೇಲೆ ಬೇಕಾಬಿಟ್ಟಿ ಕಸ ಎಸೆಯಬಾರದು. ಒಂದು ವೇಳೆ ಕಸ ರಸ್ತೆಯ ಮೇಲೆ ಎಸೆಯುತ್ತಿರುವುದು ಕಂಡುಬಂದಲ್ಲಿ ಅಂತಹ ಮಾಲೀಕರಿಗೆ ದಂಡ ವಿಧಿಸಲಾಗುವುದು ಮತ್ತು ಉದ್ದಿಮೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಸೂಚಿಸಿದರು.

ಮಾಸ್ಕ್‌ ಧರಿಸದೆ ಓಡಾಡುತ್ತಿರುವ ಸಾರ್ವಜನಿಕರಿಗೆ ಒಟ್ಟು ₹ 800 ದಂಡ ವಿಧಿಸಿ, ಜಾಗೃತಿ ಮೂಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.