ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ

Last Updated 17 ಸೆಪ್ಟೆಂಬರ್ 2022, 5:46 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಪ್ರಯುಕ್ತ ನಗರದ ಎಸ್‌ವಿಪಿ ವೃತ್ತದಲ್ಲಿ ಶನಿವಾರ ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮುಖ್ಯಮಂತ್ರಿಗಳಿಗೆ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ‌ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಭಾಗವಹಿಸಿದ್ದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ರಾಜಕುಮಾರ ಪಾಟೀಲ ತೇಲ್ಕೂರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಶಾಸಕರಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮೂಡ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂ‌.ಎಲ್‌.ಸಿ. ಅಮರನಾಥ ಪಾಟೀಲ, ಜಿಲ್ಲಾಧಿಕಾರಿ ‌ಯಶವಂತ ವಿ. ಗುರುಕರ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಹೈದ್ರಾಬಾದ ಕರ್ನಾಟಕ ಪ್ರದೇಶ ಇತಿಹಾಸ ರಚನಾ‌ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT