ಗುರುವಾರ , ಅಕ್ಟೋಬರ್ 28, 2021
18 °C
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ,ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ

ಕಲಬುರ್ಗಿ: ಬೇರೆ ವಿಭಾಗಗಳಲ್ಲೂ ಕೃಷಿ, ಸಾಂಸ್ಕೃತಿಕ ಸಂಘ ಸ್ಥಾಪನೆ -ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಈ ಭಾಗದ ಸಾಂಸ್ಕೃತಿಕ ದಾರಿದ್ರ್ಯವನ್ನು ಹೋಗಲಾಡಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಸ್ಥಾಪಿಸುವುದು ಅಗತ್ಯವಾಗಿತ್ತು. ಇದರ ಯಶಸ್ಸು ನೋಡಿಕೊಂಡು, ರಾಜ್ಯದ ಇತರ ವಿಭಾಗಗಳಲ್ಲೂ ಇದೇ ಮಾದರಿಯಲ್ಲಿ ಸಂಘಗಳನ್ನು ಸ್ಥಾಪನೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಪ್ರಗತಿ ಕೇಂದ್ರ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು, ‘ಕೆಕೆಆರ್‌ಡಿಬಿ ಮೂಲಸೌಕರ್ಯ ಕಲ್ಪಿಸುವ ಕೆಲಸ ಮಾಡುತ್ತಿದ್ದರೆ, ಈ ಸಂಘವು ನೈತಿಕ ಪಾಠ, ಸೇವಾ ಮನೋಭಾವ ಹಾಗೂ ಸಮುದಾಯ ಬೆಸೆಯುವಂತಹ ಕಾರ್ಯ ಮಾಡುತ್ತಿದೆ. ಮಾನವ ಸಂಪನ್ಮೂಲವನ್ನು ಹೆಚ್ಚಿಸುವಂತಹ, ಕೃಷಿ ಮತ್ತು ಸಾಂಸ್ಕೃತಿಕವಾಗಿ ಜನರನ್ನು ಸಿದ್ಧಪಡಿಸುವಂತಹ ಕಾಯಕ ಸಂಘ ಮಾಡುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸಾಂಸ್ಕೃತಿಕ ಈ ಸಂಘ ಸ್ಥಾಪಿಸುವುದು ತುಂಬ ಅನಿವಾರ್ಯವಾಗಿತ್ತು. ಈ ಭಾಗದ ಮೂಲಕವೇ ಮೊದಲ ಪ್ರಯೋಗ ಮಾಡಲಾಗಿದೆ. ಸಂಘ ಯಶಸ್ವಿಯಾಗುವುದು ಬಹಳಮುಖ್ಯ. ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಅವರದ್ದು ನಿಷ್ಕಲ್ಮಶ, ನಿಸ್ವಾರ್ಥ ಹಾಗೂ ಪರೋಪಕಾರಿ ವ್ಯಕ್ತಿತ್ವ. ಜನರನ್ನು ದೊಡ್ಡ ಪ್ರಮಾಣದಲ್ಲಿ ಸೆಳೆಯುವ ವ್ಯಕ್ತಿ  ಅವರು. ಸಂಘ ಮುನ್ನಡೆಸಲು ಅವರೇ ಸಮರ್ಥರು’ ಎಂದರು.

ಬಸವರಾಜ ಪಾಟೀಲ ಸೇಡಂ ಅವರು, ಸಂಘ ಕೈಗೊಂಡಿರುವ ವಿವಿಧ ಕಾರ್ಯಚಟುವಟಿಕೆಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.