ಶುಕ್ರವಾರ, ಅಕ್ಟೋಬರ್ 7, 2022
23 °C

Video: ಕಲಬುರಗಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಎಸ್‌ವಿಪಿ ವೃತ್ತದಲ್ಲಿನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ತಳವಾರ, ಕೋಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದರು.

ಕೋಲಿ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡದ ಮುಖ್ಯಮಂತ್ರಿಗೆ ಧಿಕ್ಕಾರ, ಮಾತು ತಪ್ಪಿದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ತಕ್ಷಣವೇ ಅವರನ್ನು ಪೊಲೀಸರು ವಶಕ್ಕೆ ಪಡೆದು, ಅಲ್ಲಿಂದ ಕರೆದೊಯ್ದರು.

ತಳವಾರ ಎಸ್‌ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸರ್ದಾರ್ ರಾಯಪ್ಪ ಸೇರಿದಂತೆ ಇತರರನ್ನು ವಶಕ್ಕೆ ಪಡೆದರು.

ಓದಿ... ಕಲಬುರಗಿ: ಸಿಎಂ ಕಾರಿನೊಳಗೆ‌ ಮನವಿ ಪತ್ರ ಎಸೆದ ಕೋಲಿ ಸಮುದಾಯದ ಮುಖಂಡ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು