ಕಲಬುರಗಿ: ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು ಕ್ಯಾತಲ್ಯಾಬ್ ಸಂಕೀರ್ಣವನ್ನು ಲೋಕಾರ್ಪಣೆ ಮಾಡಿದರು. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಸಚಿವ ಶರಸಬಸಪ್ಪ ದರ್ಶನಾಪುರ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಚನ್ನಾರೆಡ್ಡಿ ಪಾಟೀಲ ತುನ್ನೂರ, ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಜಯದೇವ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭಾಗವಹಿಸಿದ್ದಾರೆ.

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಗೈರು

ಆಸ್ಪತ್ರೆಯ ತೀವ್ರ ನಿಗಾ ಘಟಕ ಉದ್ಘಾಟಿಸಬೇಕಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
.ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಶೀಘ್ರ: ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.