ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮತ್ತು ಪ್ರಜಾಸೌಧ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸೆ.16 ರಂದು ಕಲಬುರಗಿಗೆ ಬರಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಮಂಡಳಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ. 16ರಂದು ಯಡ್ರಾಮಿಯಲ್ಲಿ ನಡೆಯುವ ಮಂಡಳಿ ಅನುದಾನದ ಪ್ರಜಾಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿ ಅಡಿಗಲ್ಲು ನೆರವೇರಿಸಲಿದ್ದು, ಪ್ರದೇಶದ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. 17ರಂದು ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಂಡಳಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಕೆಕೆಆರ್ಡಿಬಿ ನೆರವಿನ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ, ಅರಣ್ಯ ಆವಿಷ್ಕಾರ, ಪ್ರಜಾಸೌಧ ಹೀಗೆ ಸುಮಾರು 11 ವಿಷಯಗಳ ಮೇಲೆ ವಿವಿಧ ಇಲಾಖೆಗಳು 11 ಸ್ತಬ್ದಚಿತ್ರಗಳನ್ನು ಪ್ರದರ್ಶಿಸಬೇಕು. ನಗರದಲ್ಲಿ ವಾಕಥಾನ್, ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಆಯೋಜಿಸಬೇಕು. ಈ ಕುರಿತು ಚಿತ್ರಕಲಾ ಪರಿಷತ್ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಇನ್ನು ಹೈದರಾಬಾದ್ ಕರ್ನಾಟಕ ವಿಮೋಚನೆ ವಿಷಯನ್ನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಂದಾಳತ್ವದಲ್ಲಿ ನಡೆಯಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿಸಿಪಿ ಕನಿಕಾ ಸಿಕ್ರಿವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಕೆಕೆಆರ್ಟಿಸಿ ಸಂಸ್ಥೆಯ ಮುಖ್ಯ ಸಂಚಾರಿ ಅಧಿಕಾರಿ ಸಂತೋಷಕುಮಾರ, ಮಂಡಳಿಯ ಉಪ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಹೆಚ್ಚುವರಿ ನಿರ್ದೇಶಕಿ ಪ್ರವೀಣಪ್ರಿಯಾ ಡೇವಿಡ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಅಮೀನ್ ಮುಕ್ತಾರ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಸ್.ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.