ಕಲಬುರಗಿ: ‘ಕುಮಾರಸ್ವಾಮಿ, ಅಶೋಕ, ಯಡಿಯೂರಪ್ಪ, ವಿಜಯೇಂದ್ರನಂತವರು ನನ್ನನ್ನು ರಾಜಕೀಯವಾಗಿ ಮುಗಿಸುತ್ತೇವೆ ಎಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ನನ್ನ ಮೇಲೆ ಗೂಬೆ ಕೂಡಿಸಲು ಯತ್ನಿಸುತ್ತಿರುವವರಿಗೆ ತಕ್ಕ ಪಾಠ ಕಲಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.