ಮಂಗಳವಾರ, ಜನವರಿ 31, 2023
27 °C

ರಾಮರಾವ ಮಹಾರಾಜರ ಪುಣ್ಯಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಬಂಜಾರ ಸಮಾಜದ ಧರ್ಮಗುರು ರಾಮರಾವ ಮಹಾರಾಜ ಅವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಬಂಜಾರ ಲಂಬಾಣಿ ಸರ್ಕಾರಿ, ಅರೆ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.

ಕೇಂದ್ರ ಸಚಿವ ಭಗವಂತ ಖೂಬಾ ರಾಮರಾವ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಂಸದ ಡಾ.ಉಮೇಶ ಜಾಧವ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ನವೀಕರಿಸಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ಪ್ರದೇಶ ಬಂಜಾರ ಲಂಬಾಣಿ ಸೇವಾ ಸಂಘದ ಕಾರ್ಯಾಧ್ಯಕ್ಷ ವಿಠಲ್ ಜಾಧವ, ಬಂಜಾರ ಸರ್ಕಾರಿ ಅರೆಸರ್ಕಾರಿ ನಿವೃತ್ತ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಬಿ.ನಾಯಕ, ಪಿ.ಜಿ. ರಾಠೋಡ, ಎಸ್.ಎಸ್. ಪವಾರ, ರಾಮಚಂದ್ರ ಜಾಧವ, ಬಲದೇವ ರಾಠೋಡ, ಹೋಬಸಿಂಗ್‌ ಚವ್ಹಾಣ, ಹೀರಾಮಣಿ, ಲಾಲಪಾ ರಾಠೋಡ, ವಿಠಲ್ ಚವ್ಹಾಣ, ರಮೇಶ ಚವ್ಹಾಣ, ಸುರೇಶ ಜಾಧವ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು