ವಿಮಾನ ನಿಲ್ದಾಣದಲ್ಲಿ ಧ್ವಜಾರೋಹಣ ಮಾಡಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆ. ಇದು ಗಂಭೀರ ಸ್ವರೂಪದ ಅಪರಾಧ ಪ್ರಕರಣವಾಗಿದೆ. ರಾಷ್ಟ್ರೀಯ ಗೌರವ ಕಾಯ್ದೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಕೂಡಲೇ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಿಶೋರ ಆರ್.ಗಾಯಕವಾಡ, ಕೆಪಿಯುಡಬ್ಲ್ಯೂಸಿ ಜಿಲ್ಲಾಧ್ಯಕ್ಷ ಬಸವಲಿಂಗಪ್ಪ ಬಿರಾದಾರ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು, ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಹಾಗೂ ವಕೀಲ ಸಂದೀಪ್ ಬಿ.ಮಾಳಗೆ ದೂರಿನಲ್ಲಿ ತಿಳಿಸಿದ್ದಾರೆ.