ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಪತಿ, ಕುಲಸಚಿವರ ವಿರುದ್ಧ ದೂರು

Last Updated 25 ಜನವರಿ 2022, 4:27 IST
ಅಕ್ಷರ ಗಾತ್ರ

ಕಲಬುರಗಿ: ಬೀದರ್‌ ಜಿಲ್ಲೆಯ ಬಿ.ಇಡಿ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಲು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಸೋನರ ನಂದಪ್ಪ ಅವರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಸಂತೋಷ ಬೆನಕನಹಳ್ಳಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ಬೀದರ್‌ನ ಶಿಕ್ಷಣ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ಬಿ.ಇಡಿ ತೃತೀಯ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಮೂರು ಕೊಠಡಿಗಳಲ್ಲಿ 60ಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕ ನಕಲು ನಡೆಸಿದ್ದರು.

ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಾಲೇಜಿನ ಮುಖ್ಯಸ್ಥರು ಕುಲಪತಿ, ಮೌಲ್ಯಮಾಪನ ಕುಲಸಚಿವರು ಸೇರಿದಂತೆ ಪರೀಕ್ಷಾ ವಿಭಾಗದ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದರು. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT