ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ಭಾವನೆ ಕೆರಳಿಸುವ ಹೇಳಿಕೆ: ಜಾಧವ ವಿರುದ್ದ ಕಾಂಗ್ರೆಸ್‌ನಿಂದ ಆಯೋಗಕ್ಕೆ ದೂರು

Published 22 ಏಪ್ರಿಲ್ 2024, 14:19 IST
Last Updated 22 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಕಲಬುರಗಿ: ‘ಮಾದರಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಚುನಾವಣೆಗೆ ಸಂಬಂಧಿಸಿದ ಅಪರಾಧ ಮಾಡಿರುವ ಸಂಸದ, ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿದೆ.

‘ಕೋಮು ಬಣ್ಣ ಬಳಿಯುವ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಜಾಧವ ಸುಳ್ಳು ಆರೋಪ ಮಾಡಿದ್ದಾರೆ. ಇತ್ತೀಚಿನ ರ‍್ಯಾಲಿಯಲ್ಲಿ ಜಾಧವ ಸುಳ್ಳು ಆರೋಪ ಮಾಡಿದ್ದು, ಕಾಂಗ್ರೆಸ್ ಪಕ್ಷ ಸುಪ್ರಿಂಕೋರ್ಟ್‌ನಲ್ಲಿ ಅಫಿಡವಿಟ್ ಹಾಕುವ ಮೂಲಕ 20 ವರ್ಷಗಳಿಂದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ತಡೆದಿತ್ತು. ಕಾಂಗ್ರೆಸ್ ನಾಯಕರು ಕಪ್ಪು ಪಟ್ಟಿ ಧರಿಸುವ ಮೂಲಕ ಶ್ರೀರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟಿಸಿದ್ದರು. ಕಾಂಗ್ರೆಸ್ ಪಕ್ಷ ಸನಾತನ‌ಧರ್ಮ ಹಾಗೂ‌ ಹಿಂದೂ ಧರ್ಮದ ವಿರುದ್ಧ ತುಷ್ಟೀಕರಣದಲ್ಲಿ ತೊಡಗಿದ್ದು ಕೀಳು ರಾಜಕೀಯ ಮಾಡುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. 

ಈ‌ ರೀತಿ ಸುಳ್ಳು ಹೇಳಿಕೆಗಳ ಮೂಲಕ ಕೋಮುಭಾವನೆ ಮೂಡಿಸುವ ಮೂಲಕ ಉಮೇಶ ಜಾಧವ ಚುನಾವಣೆಗೆ ಸಂಬಂಧಿಸಿದಂತೆ ಅಪರಾಧ ಮಾಡಿದ್ದಾರೆ’ ಎಂದು ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT