ಶನಿವಾರ, ಆಗಸ್ಟ್ 13, 2022
27 °C

ಕಲಬುರ್ಗಿ: ಬಸ್ ಸಂಚಾರ ಸಂಪೂರ್ಣ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದ ಕೇಂದ್ರ ‌ಬಸ್ ನಿಲ್ದಾಣದಿಂದ ‌ವಿವಿಧೆಡೆ ತೆರಳುವ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಚಾಲಕ ಹಾಗೂ ನಿರ್ವಾಹಕರು ಬಸ್ ಗಳನ್ನು ಪ್ಲಾಟ್ ಫಾರಂನಿಂದ ಬೇರೆಡೆ ನಿಲ್ಲಿಸಿ ಮುಷ್ಕರಕ್ಕೆ ಕೈಜೋಡಿಸಿದ್ದಾರೆ.

ಬಸ್‌ಗಳಲ್ಲಿ ಪ್ರಯಾಣಿಕರು ಕುಳಿತುಕೊಂಡಿದ್ದು, ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಅಧಿಕಾರಿಗಳು ಮೈಕ್ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದರೂ‌ ಮುಷ್ಕರ ನಿರತ ಸಿಬ್ಬಂದಿ ಮುಷ್ಕರ ಮುಂದುವರಿಸಿದ್ದಾರೆ.

ಹಲವು ವರ್ಷಗಳಿಂದಲೂ ತಮ್ಮನ್ನು ‌ಪೂರ್ಣ‌ ಪ್ರಮಾಣದ ‌ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಬೇಡಿಕೆ ಇಟ್ಟರೂ ಸರ್ಕಾರ ಸ್ಪಂದಿಸಿಲ್ಲ. ಗುರುವಾರ ರಾತ್ರಿ ಬೆಂಗಳೂರಿನಲ್ಲಿ ‌ಮುಷ್ಕರ ನಿರತ ಸಿಬ್ಬಂದಿಯನ್ನು ‌ಬಂಧಿಸಲಾಗಿದೆ.‌ ಸರ್ಕಾರದ ಈ ಧೋರಣೆಯನ್ನು ‌ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಸ್ ಚಾಲಕರೊಬ್ಬರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು