ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಪೊಲೀಸರ ವರ್ತನೆಗೆ ಖಂಡನೆ

ಕೊಳಗೇರಿ ನಿವಾಸಿಗಳ ಒಕ್ಕೂಟದಿಂದ ಮನವಿ ಪತ್ರ
Published 2 ಜೂನ್ 2023, 15:45 IST
Last Updated 2 ಜೂನ್ 2023, 15:45 IST
ಅಕ್ಷರ ಗಾತ್ರ

ಕಲಬುರಗಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿ ಪಟುಗಳ ಮೇಲೆ ದೆಹಲಿ ಪೊಲೀಸರು ತೋರಿದ ವರ್ತನೆ ಖಂಡಿಸಿ ಕೊಳಗೇರಿ ನಿವಾಸಿಗಳ ಒಕ್ಕೂಟ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.

ನೂತನ ಸಂಸತ್ ಭವನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಕುಸ್ತಿ ಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಕುಸ್ತಿ ಒಕ್ಕೂಟಗಳ ಅಧ್ಯಕ್ಷ ಬ್ರಿಜ್‍ಭೂಷಣಸಿಂಗ್ ವಿರುದ್ಧ ಕೆಲ ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದರು. ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವುದು ಖಂಡನೀಯ ಎಂದು ಹೇಳಿದರು.

ಪ್ರತಿಭಟನಾ ನಿರತ ಕುಸ್ತಿ ಪಟುಗಳು ದೇಶದ ಆಸ್ತಿ ಮತ್ತು ಗೌರವವಾಗಿದ್ದು, ಅದನ್ನು ನಾವುಗಳು ಮರೆಯಬಾರದು ಅಲ್ಲದೇ ಅವರಿಗೆ ಈ ರೀತಿ ಸರ್ಕಾರ ನಡೆಸಿಕೊಳ್ಳುವುದು ನೋವಿನ ಸಂಗತಿ. ಕೂಡಲೇ ಕುಸ್ತಿ ಪಟುಗಳ ಬೇಡಿಕೆಗಳ ಈಡೇರಿಕೆಗೆ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಒಕ್ಕೂಟದ ಗೌರವಾಧ್ಯಕ್ಷ ಬಾಬುರಾವ ದಂಡಿನಕರ್, ಅಧ್ಯಕ್ಷ ಅಲ್ಲಮಪ್ರಭು ನಿಂಬರ್ಗಾ, ಕಾರ್ಯದರ್ಶಿ ವಿಕಾಸ್ ಸವಾರಿಕರ್, ಸಹ ಕಾರ್ಯದರ್ಶಿ ಬ್ರಹ್ಮಾನಂದ ಮಿಂಚಾ, ಉಪಾಧ್ಯಕ್ಷ ಅನೀಲ ಚಕ್ರ, ಮುಖಂಡರಾದ ಯಮನಪ್ಪ ಪ್ರಸಾದ್, ಗಣೇಶ ಕಾಂಬಳೆ, ಯೇಸುರಾಜ, ಅಶೋಕ ರಾಠೋಡ, ಮಲ್ಲಿಕಾರ್ಜುನ ಕಾಂಬಳೆ, ಸಿದ್ರಾಮ ತಿರ್ಮಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT