ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀಸ್ತಾ ಬಂಧನ ಖಂಡಿಸಿ ಮೌನ ಪ್ರತಿಭಟನೆ

Last Updated 27 ಜೂನ್ 2022, 4:56 IST
ಅಕ್ಷರ ಗಾತ್ರ

ಕಲಬುರಗಿ: ತೀಸ್ತಾ ಸೆಟಲವಾಡ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಮತ್ತು ಫುಲೆ ಸ್ಟಡಿ ಸರ್ಕಲ್ ಸಹಯೋಗದಲ್ಲಿ ಭಾನುವಾರ ಜಗತ್ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಯಿತು.

‘ಭಾರತವು ವಿವಿಧ ಜನಾಂಗ, ಭಾಷೆ, ಸಂಸ್ಕೃತಿ ಹೋಂದಿರುವ ದೇಶ. ಭಾರತ ಸಂವಿಧಾ‌ನವು ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಹಕ್ಕನ್ನು ನೀಡಿದೆ. ಆದರೆ ಭಾರತ ಸರ್ಕಾರವು ಪ್ರಶ್ನಿಸುವವರನ್ನು ಬಂಧಿಸುತ್ತ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದೆ. ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಸಂವಿಧಾನಕ್ಕೆ ದೇಶದ‌ ಕಾನೂನಿಗೆ ತಲೆ ಬಾಗದೆ ಆರ್‌ಎಸ್ಎಸ್‌ನ ಒಂದು ಘಟಕವಾಗಿ ಕೆಲಸ ಮಾಡುತ್ತ ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ. ತೀಸ್ತಾ ಸೆಟಲ್ವಾಡ್ ಅವರ ಅಕ್ರಮ ಬಂಧನ ವಿರೋಧಿಸುತ್ತ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕಿ ಅಶ್ವಿನಿ ಮದನಕರ, ಭವಾನಿ ಪ್ರಸಾದ್, ಪೂಜಾ ಸಿಂಗೆ, ಸಾಗರ್ ಎ. ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT