ಕಲಬುರಗಿ: ‘ಅಂತರರಾಷ್ಟ್ರೀಯ ಉನ್ನತ ಮಟ್ಟದ ಸಮ್ಮೇಳನಗಳನ್ನು ಆಯೋಜಿಸುವುದರಿಂದ ಮತ್ತು ಅದರಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಮತ್ತು ಪ್ರಾಧ್ಯಾಪಕರ ಮಿದುಳು ಚುರುಕುಗೊಂಡು, ಭವಿಷ್ಯದಲ್ಲಿ ಅವರ ಸಂಶೋಧನಾ ಕೌಶಲವನ್ನು ಸುಧಾರಿಸುತ್ತದೆ’ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮತ್ತು ಶರಣಬಸವ ವಿವಿ ಆಡಳಿತ ಮಂಡಳಿ ಸದಸ್ಯ ಬಸವರಾಜ ದೇಶಮುಖ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ವತಿಯಿಂದ ಐಇಇಇ ತಾಂತ್ರಿಕ ಸಹ ಪ್ರಾಯೋಜಕತ್ವದಲ್ಲಿ ನಗರದ ಶರಣಬಸವ ವಿವಿ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಸಮಗ್ರ ಬುದ್ಧಿಮತ್ತೆ ಮತ್ತು ಸಂವಹನ ವ್ಯವಸ್ಥೆಗಳು’ ಕುರಿತ 3ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಹಲವಾರು ತಾಂತ್ರಿಕ ಅಧಿವೇಶನಗಳಲ್ಲಿ ನಡೆಯುತ್ತಿರುವ ಎರಡು ದಿನಗಳ ಚರ್ಚೆಯಲ್ಲಿ ದೇಶದಾದ್ಯಂತ 230ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿರುವುದು ಹರ್ಷದಾಯಕವಾಗಿದೆ. ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರು ಯಾವಾಗಲೂ ಸಮ್ಮೇಳನಗಳ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದರು’ ಎಂದರು.

ವಿಟಿಯು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಡಿ.ಸಿ.ಶುಭಾಂಗಿ ಮಾತನಾಡಿ, ‘ಭವಿಷ್ಯದಲ್ಲಿ ಸಂಶೋಧನಾ ಕಾರ್ಯವನ್ನು ಕೈಗೆತ್ತಿಕೊಳ್ಳಲಿರುವ ಯುವ ಸಂಶೋಧನಾ ವಿದ್ವಾಂಸರು ಮತ್ತು ವಿದ್ಯಾರ್ಥಿಗಳು ಸಮಾಜದ ಮೇಲೆ ಪರಿಣಾಮ ಬೀರುವ ಮತ್ತು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ, ವಾಸ್ತವ ಸಮಸ್ಯೆಗಳನ್ನು ತಮ್ಮ ಸಂಶೋಧನಾ ವಿಷಯವಾಗಿ ಆಯ್ಕೆ ಮಾಡಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಮಾತನಾಡಿ, ‘ಭಾರತ ಮತ್ತು ಜಗತ್ತಿನ ವಿವಿಧ ಭಾಗಗಳಿಂದ 1,600ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ವಿದ್ವಾಂಸರು ಸಲ್ಲಿಸಿದ್ದಾರೆ. ಅವುಗಳಲ್ಲಿ ಸುಮಾರು 235 ಪ್ರಬಂಧಗಳನ್ನು ಸಂಪೂರ್ಣ ಪರಿಶೀಲನೆಯ ನಂತರ ಸ್ವೀಕರಿಸಲಾಗಿದೆ’ ಎಂದು ತಿಳಿಸಿದರು.

ಕುಲಸಚಿವರಾದ ಲಕ್ಷ್ಮಿ ಪಾಟೀಲ ಮಾಕಾ ಸಮ್ಮೇಳನದ ಸಂಕ್ಷಿಪ್ತ ಪರಿಚಯ ನೀಡಿದರು.

ಪೋರ್ಚುಗಲ್ನ ಲಿಸ್ಬನ್ನಲ್ಲಿರುವ ಇನ್ಸ್ಟಿಟ್ಯೂಟ್ ಡಿಇ ಟೆಲಿಕಮ್ಯುನಿಕೇಷನ್ನ ಹಿರಿಯ ಸಂಶೋಧಕ ರೊಡಾಲ್ಫೊ ಓಲಿವೇರಾ ಮತ್ತು ಮಂಡಿಯಲ್ಲಿರುವ ಐಐಟಿ ಸ್ಕೂಲ್ ಆಫ್ ಕಂಪ್ಯೂಟಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನ ದಿನೇಶ್ ಸಿಂಗ್, ಬೆಂಗಳೂರಿನ ಶ್ರೀಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕೆ.ಎಲ್. ಹೇಮಲತಾ, ಶರಣಬಸವ ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ. ವಿ.ಡಿ. ಮೈತ್ರಿ, ಮೌಲ್ಯಮಾಪನ ಕುಲಸಚಿವ ಎಸ್.ಎಚ್. ಹೊನ್ನಳ್ಳಿ ಮತ್ತು ಹಣಕಾಸು ಅಧಿಕಾರಿ ಕಿರಣ್ ಮಾಕಾ ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯದ ಡೀನ್ ಶಿವಕುಮಾರ ಜವಳಿಗಿ ಸ್ವಾಗತಿಸಿದರು. ಸಂಶೋಧನಾ ಡೀನ್ ಸುಜಾತಾ ವಿ.ಮಲ್ಲಾಪುರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.