ಸೋಮವಾರ, ಅಕ್ಟೋಬರ್ 26, 2020
23 °C

ಎಪಿಎಂಸಿ, ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಅ.10ರಿಂದ ಕಾಂಗ್ರೆಸ್ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೇಂದ್ರ ಸರ್ಕಾರವು ಎಪಿಎಂಸಿ, ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಕ್ರಮದ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸಹಿ ಅಭಿಯಾನ ಕೈಗೊಳ್ಳಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮಂಡ್ಯದಲ್ಲಿ ಅ.10ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಂತಾದವರು ಭಾಗವಹಿಸುವರು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಭಿಯಾನದ ಭಾಗವಾಗಿ ದೇಶದಾದ್ಯಂತ ಸಂಚರಿಸಿ 10  ಕೋಟಿಗೂ ಹೆಚ್ಚು ಸಹಿ ಸಂಗ್ರಹಿಸಲಾಗುವುದು. ನವೆಂಬರ್ 14ರಂದು ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಾಗುವುದು‌. ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದು ಅವರು ವಿವರಿಸಿದರು.

ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅಲ್ಲದೇ ಕೃಷಿ ಕ್ಷೇತ್ರದ ಮೇಲೆಯೂ ದುಷ್ಪರಿಣಾಮ ಬೀರಲಿದೆ. ಎಪಿಎಂಸಿ ವ್ಯವಸ್ಥೆಗೆ ಧಕ್ಕೆಯಾಗಲಿದೆ. ರೈತರ ಪರಿಸ್ಥಿತಿ ಗಂಭೀರವಾಗಲಿದೆ. ಈ ಎಲ್ಲಾ ಅಂಶಗಳನ್ನು ಅಭಿಯಾನದಲ್ಲಿ ಬಿಂಬಿಸಲಾಗುವುದು. ರೈತರು, ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಮುಖಂಡ, ಶರಣಪ್ರಕಾಶ್ ಪಾಟೀಲ, ಶಾಸಕ ಅಜಯ್ ಸಿಂಗ್, ಶಾಸಕರಾದ ಖನೀಜ್ ಫಾತಿಮಾ, ಎಂಎಲ್‌ಸಿ‌ ಚಂದ್ರಶೇಖರ್,‌ ಡಿಸಿಸಿ ಅಧ್ಯಕ್ಷರಾದ ಜಗದೇವ, ಎಂಎಲ್‌ಸಿ ಅಭ್ಯರ್ಥಿ ಶರಣಪ್ಪ ಮಟ್ಟೂರು, ಗುತ್ತೇದಾರ, ಕೆ.ಬಿ.ಶಾಣಪ್ಪ, ತಿಪ್ಪಣ್ಣಪ್ಪ‌ ಕಮಕನೂರು, ಶರಣಪ್ಪ ಮಾನೇಗಾರ್,  ಸುಭಾಷ್ ರಾಠೋಡ್, ವಿಜಯಕುಮಾರ ಜಿ ರಾಮಕೃಷ್ಣ  ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು