ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ, ಜೆಡಿಎಸ್‌ನಿಂದ ಬೇಟಿ ಬಚಾವೊ ಮಾಡಬೇಕಿದೆ: ಸುರ್ಜೇವಾಲಾ

Published 29 ಏಪ್ರಿಲ್ 2024, 4:19 IST
Last Updated 29 ಏಪ್ರಿಲ್ 2024, 4:19 IST
ಅಕ್ಷರ ಗಾತ್ರ

ಕಲಬುರಗಿ: ‘ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವುದು ಪ್ರಧಾನಿ ಮೋದಿ ಅವರ ಘೋಷಣೆಯಾಗಿತ್ತು. ಈಗ ಅದೇ ಘೋಷಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಬೇಟಿ ಬಚಾವೊ ಎಂದು ಬದಲಾಯಿಸಬೇಕಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕುಟುಕಿದರು.

ನಗರದ ಕೆಬಿಎನ್ ಸಭಾಂಗಣದಲ್ಲಿ ಭಾನುವಾರ ನಡೆದ ಬುದ್ಧಿಜೀವಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕ ಜೀವನದಲ್ಲಿ ಇರುವವರು ನುಡಿದಂತೆ ನಡೆದುಕೊಂಡಾಗ ಆಡಿದ ಮಾತುಗಳಿಗೆ ಬೆಲೆ ಬರುತ್ತದೆ. 2014ರಲ್ಲಿ ಮಹಾನುಭಾವರೊಬ್ಬರು (ಮೋದಿ) ವಿದೇಶದಲ್ಲಿರುವ ಕಪ್ಪು ಹಣ ತರುವುದಾಗಿ ಹೇಳಿದ್ದರು. ಭಾರತೀಯರಿಗೆ ತಲಾ ₹ 15 ಲಕ್ಷ ಹಂಚುವುದಾಗಿ ಮಾತು ಕೊಟ್ಟಿದ್ದರು. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿಯೂ ಹೇಳಿದ್ದರು. ಆದರೆ, 10 ವರ್ಷಗಳು ಕಳೆದರೂ ಯಾವುದೇ ಭರವಸೆ ಈಡೇರಿಸಲಿಲ್ಲ’ ಎಂದರು.

‘ಮೋದಿ ಅವರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಮಾತನಾಡಲು ಯಾವುದೇ ವಿಷಯಗಳು‌ ಇಲ್ಲದೆ ಕಾಂಗ್ರೆಸ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಟು‌ಶಬ್ದಗಳಿಂದ ಟೀಕಿಸುತ್ತಾರೆ. ಚುನಾವಣೆ ವೇಳೆ ಧರ್ಮಗಳ ಆಧಾರದ ಮೇಲೆ ಮಾತುಗಳನ್ನು ಆಡುತ್ತಿದ್ದಾರೆ’ ಎಂದು ಜರಿದರು.

ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕನೀಜ್ ಫಾತಿಮಾ ಮಾತನಾಡಿ, ‘ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಿಷ್ಠಗೊಳಿಸಬೇಕು’ ಎಂದರು.

ಖಾಜಾ ಬಂದಾ ನವಾಜ್‌ ದರ್ಗಾದ ಮುಸ್ತಾಫ್ ಅಲ್ ಹುಸೇನ್ ಮಾತನಾಡಿ ‘ದೇಶದ ಯುವಕರ ಮನಸ್ಸಿನಲ್ಲಿ ವಿಷ ಬಿತ್ತಲಾಗುತ್ತಿದೆ. ಪ್ರಸ್ತುತ ವಾತಾವರಣದಲ್ಲಿ ಸಂವಿಧಾನ ಹಾಗೂ ಪ್ರಜಾತಂತ್ರ ವ್ಯವಸ್ಥೆ ಅಪಾಯದಲ್ಲಿದೆ. ಅವುಗಳ ರಕ್ಷಣೆ ಮಾಡಬೇಕಾಗಿದೆ’ ಎಂದು ಹೇಳಿದರು.

ಸಚಿವ ಪ್ರಿಯಾಂಕ್ ‌ಖರ್ಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ಇತರೆ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT