ಭಾನುವಾರ, ಜನವರಿ 19, 2020
27 °C

ಕಲಬುರ್ಗಿ: ಚಪಾಕ್‌ ಸಿನಿಮಾ ವೀಕ್ಷಿಸಲಿರುವ ಕಾಂಗ್ರೆಸ್‌ ಕಾರ್ಯಕರ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬಾಲಿವುಡ್‌ ನಟಿ ದೀ‍ಪಿಕಾ ಪಡುಕೋಣೆ ಅವರು ನಟಿಸಿದ ಚಪಾಕ್‌ ಸಿನಿಮಾಕ್ಕೆ ಬಿಜೆಪಿ ಕಾರ್ಯಕರ್ತರು ಬಹಿಷ್ಕಾರ ಹಾಕಿದ್ದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕಾರ್ಯಕರ್ತರು ಇದೇ 11ರಂದು ಮಧ್ಯಾಹ್ನ 1ರ ಪ್ರದರ್ಶನ ವೀಕ್ಷಿಸಲು ಎಲ್ಲ ಟಿಕೆಟ್‌ಗಳನ್ನು ಖರೀದಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ, ‘ಆ್ಯಸಿಡ್‌ ಸಂತ್ರಸ್ತೆ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೀಪಿಕಾ ಅವರ ಸಾಮಾಜಿಕ ಬದ್ಧತೆಯನ್ನು ಬೆಂಬಲಿಸಲು ಹಾಗೂ ಫ್ಯಾಸಿಸ್ಟ್‌ ಶಕ್ತಿಗಳನ್ನು ಬಗ್ಗುಬಡಿಯಲು ಯುವ ಕಾಂಗ್ರೆಸ್‌ ಕಾರ್ಯಕರ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಾಟೀಲ ಝಳಕಿ, ‘ಮಿರಾಜ್‌ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗುವುದು. ಈ ಮೂಲಕ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಪ್ರತಿಭಟಿಸುವವರ ಪರವಾಗಿ ಕಾಂಗ್ರೆಸ್‌ ನಿಂತಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇವೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು